ಕನ್ನಡ (Kannada): Kannada Unlocked Literal Bible

Updated ? hours ago # views See on DCS

ಪೇತ್ರನು ಬರೆದ ಎರಡನೆಯ ಪತ್ರಿಕೆ

Chapter 1

ಪೀಠಿಕೆ

1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು [1] ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ [2] ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ, 2 ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ [3] ಪರಿಜ್ಞಾನದಲ್ಲಿ ನಿಮಗೆ [4] ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.

ಭಕ್ತಿವೃದ್ಧಿಗೆ ಅನುಕೂಲವಾದ ಪ್ರೇರಣೆಗಳು

3 ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ [5] ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು. 4 ನೀವು ಲೋಕದಲ್ಲಿ [6] ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ [7] ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ. 5 ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ [8] ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ, 6 ಜ್ಞಾನಕ್ಕೆ [9] ದಮೆಯನ್ನೂ, ದಮೆಗೆ [10] ತಾಳ್ಮೆಯನ್ನೂ, 7 ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ [11] ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ [12] ಪ್ರೀತಿಯನ್ನೂ ಕೂಡಿಸಿರಿ. 8 ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, [13] ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ. 9 ಇವುಗಳಿಲ್ಲದವನು [14] ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ [15] ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. 10 ಆದ್ದರಿಂದ ಪ್ರಿಯರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, [16] ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ [17] ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ. 11 ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ [18] ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.

ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುವುದಕ್ಕೆ ದೃಢವಾದ ಆಧಾರ ಉಂಟು

12 ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ [19] ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ [20] ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು. 13 ನಾನು [21] ನನ್ನ ದೇಹವೆಂಬ ಗುಡಾರದಲ್ಲಿರುವ ತನಕ [22] ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ. 14 ಏಕೆಂದರೆ [23] ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು [24] ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು. 15 ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು. 16 ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, [25] ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ [26] ಚಮತ್ಕಾರದಿಂದ ಕಲ್ಪಿಸಿದ [27] ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. [28] ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು. 17 ಏಕೆಂದರೆ, [29] <<ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ>> ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ. 18 ನಾವು [30] ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು. 19 ಇದಲ್ಲದೆ [31] ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು [32] ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ [33] ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು. 20 ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ. 21 ಏಕೆಂದರೆ [34] ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು [35] ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.


1:1 [1] ರೋಮಾ. 3:21-26:
1:1 [2] ರೋಮಾ. 1:12; ತೀತ. 1:4:
1:2 [3] 2 ಪೇತ್ರ. 1:3,8; 2:20; 3:18. ಯೋಹಾ. 173; ಫಿಲಿ. 3:8:
1:2 [4] 1 ಪೇತ್ರ. 1:2; ಯೂದ. 2:
1:3 [5] 1 ಥೆಸ. 2:12; 2 ಥೆಸ. 2:14; 2 ತಿಮೊ. 1:9; 1 ಪೇತ್ರ. 5:10:
1:4 [6] 2 ಪೇತ್ರ. 2:18,20:
1:4 [7] ಎಫೆ. 4:24; ಇಬ್ರಿ. 12:10; 1 ಯೋಹಾ 3:2:
1:5 [8] ಫಿಲಿ. 4:8:
1:6 [10] ಇಬ್ರಿ. 10:36; ಯಾಕೋಬ. 1:3;
1:6 [9] ಅ. ಕೃ. 24:25; ಗಲಾ. 5:22-23:
1:7 [11] ಇಬ್ರಿ. 13:1:
1:7 [12] 1 ಕೊರಿ. 13; 1 ಯೋಹಾ 4:16:
1:8 [13] ಯೋಹಾ. 15:2; ತೀತ. 3:14:
1:9 [14] ಯೋಬ. 5:14; 12:25; ಚೆಫ. 1:17;
1:9 [15] ಎಫೆ. 5:26; ತೀತ. 2:14; 1 ಯೋಹಾ. 1:7; ಪ್ರಕ. 7:14:
1:10 [16] 1 ಥೆಸ. 1:4:
1:10 [17] ಫಿಲಿ. 2:12; ಇಬ್ರಿ. 3:14:
1:11 [18] ಕೊಲೊ. 1:13; ಅ. ಕೃ. 14:22:
1:12 [19] 2 ಯೋಹಾ 2:
1:12 [20] ಯೂದ. 5. ಫಿಲಿ. 3:1:
1:13 [21] 2 ಕೊರಿ. 5:1,4:
1:13 [22] 2 ಪೇತ್ರ. 3:1:
1:14 [23] ಯೋಹಾ 21:18,19:
1:14 [24] 2 ತಿಮೊ. 4:6:
1:16 [25] 1 ಥೆಸ. 2:19:
1:16 [26] 1 ಕೊರಿ. 1:17:
1:16 [27] 1 ತಿಮೊ. 1:4:
1:16 [28] ಮತ್ತಾ 17:1,2,6; ಮಾರ್ಕ. 9:2; ಯೋಹಾ. 1:14:
1:17 [29] ಮತ್ತಾ 17:5; 3:17; ಲೂಕ. 9:35:
1:18 [30] ವಿಮೋ. 3:5; ಯೆಹೋ. 5:15:
1:19 [31] 1 ಪೇತ್ರ. 1:10:
1:19 [32] ಅಥವಾ, ಸೂರ್ಯನು, ದಿವಾಕರನು; ಮಲಾ. 4:2; ಪ್ರಕ. 2:28; 22:16:
1:19 [33] ಕೀರ್ತ. 119:105; ಯೋಹಾ 5:35:
1:21 [34] 2 ತಿಮೊ. 3:16:
1:21 [35] 1 ಪೇತ್ರ. 1:11; 2 ಸಮು. 23:2; ಅ. ಕೃ. 1:16; ಯಾಕೋಬ. 5:10:

Chapter 2

ದುರ್ಮಾರ್ಗತನವನ್ನು ಬೋಧಿಸುವವರ ವಿಷಯದಲ್ಲಿ ಎಚ್ಚರಿಕೆ (ಯೂದ 1-19)

1 ಆದರೆ ಇಸ್ರಾಯೇಲ್ ಜನರೊಂದಿಗೆ [1] ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ [2] ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು [3] ರಹಸ್ಯವಾಗಿ ಒಳಗೆತರುವವರೂ [4] ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ [5] ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. 2 ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. [6] ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. 3 ಅವರು [7] ದ್ರವ್ಯಾಶೆಯುಳ್ಳವರಾಗಿ [8] ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ [9] ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ. 4 ಹೇಗೆಂದರೆ [10] ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ [11] ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ [12] ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. 5 ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ [13] ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ [14] ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು. 6[15] ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ [16] ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. 7 ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ [17] ಲೋಟನನ್ನು ಕಾಪಾಡಿದನು. 8 ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ [18] ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು. 9 ಕರ್ತನು [19] ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ. 10 ಮುಖ್ಯವಾಗಿ [20] ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು [21] ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. [22] ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು. 11[23] ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ. 12[24] ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ [25] ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು. 13 ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. [26] ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು [27] ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು [28] ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ. 14 ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, [29] ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, [30] ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ. 15 ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ [31] ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು. 16 ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. [32] ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು. 17 ಇವರು [33] ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. [34] ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ. 18 ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ [35] ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ [36] ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. 19 ಇಂಥವರು [37] ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ [38] ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.

20 ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ [39] ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ [40] ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. 21[41] ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು. 22[42] <<ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.>> ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.


2:1 [1] ಧರ್ಮೋ. 13:1-3; ಯೆರೆ. 14:14; 23:16; ಅ. ಕೃ. 13:6; 1 ಯೋಹಾ 4:1:
2:1 [2] ಅ. ಕೃ. 20:30; 2 ಕೊರಿ. 11:13; 1 ತಿಮೊ. 4:1:
2:1 [3] ಯೂದ. 4; ಗಲಾ. 2:4:
2:1 [4] 1 ಕೊರಿ. 6:20; 7:23; ಗಲಾ. 3:13; 4:5; ವಿಮೋ. 15:16:
2:1 [5] ಮತ್ತಾ 10:33:
2:2 [6] ರೋಮಾ. 2:24:
2:3 [7] 1 ತಿಮೊ. 6:5; ತೀತ. 1:11:
2:3 [8] ರೋಮಾ. 16:18; ಕೊಲೊ. 2:4:
2:3 [9] ಧರ್ಮೋ. 32:35; ಫಿಲಿ. 3:19:
2:4 [10] ಯೂದ. 6:
2:4 [11] ಮತ್ತಾ 25:41:
2:4 [12] ಪ್ರಕ. 20:2,3,10:
2:5 [13] 2 ಪೇತ್ರ. 3:6; 1 ಪೇತ್ರ. 3:20; ಆದಿ. 7:10, 8:14:
2:5 [14] 1 ಪೇತ್ರ. 3:20:
2:6 [15] ಆದಿ. 19:24:
2:6 [16] ಅರಣ್ಯ. 26:10:
2:7 [17] ಆದಿ. 19:16:
2:8 [18] ಕೀರ್ತ. 119:136,158; ಯೆಹೆ. 9:4:
2:9 [19] 1 ಕೊರಿ. 10:13; ಪ್ರಕ. 3:10:
2:10 [20] ಯೂದ. 16,18.
2:10 [21] ಯೂದ. 8.
2:10 [22] ಯೂದ. 8. ಕೆಲವು ಪ್ರತಿಗಳಲ್ಲಿ ದೇವದೂತರು ಎಂದು ಬರೆದದೆ.
2:11 [23] ಯೂದ. 9:
2:12 [24] ಯೂದ. 10; ಯೆರೆ. 12:3:
2:12 [25] ಫಿಲಿ. 3:19:
2:13 [26] ಅಥವಾ, ತಾತ್ಕಾಲಿಕ ಭೋಗಾನುಭವವನ್ನೇ.
2:13 [27] 1 ಕೊರಿ. 11:21:
2:13 [28] ಕೆಲವು ಪ್ರತಿಗಳಲ್ಲಿ, ಪ್ರೇಮಭೋಜನಗಳಲ್ಲಿ ಎಂದು ಬರೆದದೆ; ಯೂದ. 12:
2:14 [29] 1 ಪೇತ್ರ. 4:1:
2:14 [30] ಎಫೆ. 2:3:
2:15 [31] ಅರಣ್ಯ. 22:5,7; ಧರ್ಮೋ. 23:4; ನೆಹೆ. 13:2; ಯೂದ 11:
2:16 [32] ಅರಣ್ಯ. 22:21,23,28:
2:17 [33] ಯೂದ 12:
2:17 [34] ಯೂದ 13:
2:18 [35] 2 ಪೇತ್ರ. 1:4; 2:20:
2:18 [36] ಯೂದ 16:
2:19 [37] ಗಲಾ. 5:13; ಯಾಕೋಬ. 1:25:
2:19 [38] ಯೋಹಾ 8:34; ರೋಮಾ. 6:16:
2:20 [39] ವ. 18:
2:20 [40] ಮತ್ತಾ 12:45:
2:21 [41] ಯೆಹೆ. 18:24; ಲೂಕ. 12:47; ಯಾಕೋಬ. 4:17:
2:22 [42] ಜ್ಞಾ. 26:11:

Chapter 3

ದೇವರ ದಿನವು ತಡವಾದರೂ ಅದು ಬರುವುದು ನಿಶ್ಚಯ

1 ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. 2[1] ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ [2] ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ [3] ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.

3 ಕಡೆ ದಿನಗಳಲ್ಲಿ [4] ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ, 4[5] <<ಆತನ ಪ್ರತ್ಯಕ್ಷತೆಯ ವಿಷಯವಾದ [6] ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?>> ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು. 5 ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು [7] ದೇವರ ವಾಕ್ಯದ ಮೂಲಕ [8] ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ. 6[9] ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು. 7 ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು [10] ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.

8 ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ [11] ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ. 9[12] ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. [13] ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ [14] ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ [15] ದೀರ್ಘಶಾಂತಿಯುಳ್ಳವನಾಗಿದ್ದಾನೆ. 10 ಆದರೂ [16] ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. [17] ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. [18] ಮೂಲಧಾತುಗಳು ಉರಿದು ಲಯವಾಗಿ ಹೋಗುವವು. [19] ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.

ಲೋಕಾಂತ್ಯವನ್ನು ಎದುರುನೋಡುತ್ತಾ ಪರಿಶುದ್ಧರಾಗಿ ನಡೆಯಿರಿ ಎಂಬ ಬೋಧನೆ

11 ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? [20] ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು. 12 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ [21] ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು. 13 ಆದರೂ ನಾವು ದೇವರ ವಾಗ್ದಾನದ ಪ್ರಕಾರ [22] ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. [23] ಅವುಗಳಲ್ಲಿ ನೀತಿಯು ವಾಸವಾಗಿರುವುದು.

14[24] ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು [25] ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ. 15[26] ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. [27] ನಮ್ಮ ಪ್ರಿಯ ಸಹೋದರನಾದ ಪೌಲನು ಸಹ [28] ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ [29] ನಿಮಗೆ ಬರೆದಿದ್ದಾನೆ. 16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ [30] ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು [31] ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ. 17 ಆದಕಾರಣ ಪ್ರಿಯರೇ, [32] ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ [33] ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ. 18 ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ [34] ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. [35] ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


3:2 [1] ಲೂಕ. 1:70; ಅ. ಕೃ. 3:21:
3:2 [2] ಯೂದ. 17:
3:2 [3] 2 ಪೇತ್ರ. 1:13:
3:3 [4] ಯೂದ. 18:
3:4 [5] 1 ಥೆಸ. 2:19:
3:4 [6] ಯೆಶಾ. 5:19; ಯೆರೆ. 17:15; ಯೆಹೆ. 11:3; 12:22, 27; ಮಲಾ. 2:17:
3:5 [7] ಆದಿ. 1:6, 7, 9; ಕೀರ್ತ. 33:6; ಇಬ್ರಿ. 11:3:
3:5 [8] ಕೀರ್ತ. 24:2; 136:6:
3:6 [9] ಆದಿ. 7:11, 21; 2 ಪೇತ್ರ. 2:5:
3:7 [10] 2 ಥೆಸ. 1:9:
3:8 [11] ಕೀರ್ತ. 90. 4:
3:9 [12] ಹಬ. 2:3; ಇಬ್ರಿ. 10:37; ಪ್ರಸಂಗಿ. 8:11:
3:9 [13] ಯೆಹೆ. 18:23, 32; 33:11:
3:9 [14] 1 ತಿಮೊ. 2:4:
3:9 [15] ಯೆಶಾ. 30. 18; ಲೂಕ. 18:7; 1 ಪೇತ್ರ. 3:20:
3:10 [16] ಮತ್ತಾ 24:42-51; ಲೂಕ. 12:39-46; 1 ಥೆಸ. 5:2; ಪ್ರಕ. 3:3:
3:10 [17] ಮತ್ತಾ 24:35; ಇಬ್ರಿ. 12:26, 27; ಪ್ರಕ. 6:14; 20:11; 21:1:
3:10 [18] ಯೆಶಾ. 34:4:
3:10 [19] ಕೆಲವು ಪ್ರತಿಗಳಲ್ಲಿ ಭೂಮಿಯೂ ಅದರಲ್ಲಿರುವ ಕೆಲಸಗಳೂ ಕಾಣುವವೇ? ಎಂದು ಬರೆದದೆ.
3:11 [20] 1 ಪೇತ್ರ. 1:15:
3:12 [21] ಅಥವಾ, ಬೇಗ ಬರುವಂತೆ ಪ್ರಯತ್ನಿಸುತ್ತಾ.
3:13 [22] ಯೆಶಾ. 65:17; 66:22; ಪ್ರಕ. 21:1:
3:13 [23] ಯೆಶಾ. 60. 21; ಪ್ರಕ. 21:27:
3:14 [24] 1 ಕೊರಿ. 15:58; 1 ಥೆಸ. 3:13; 5:23:
3:14 [25] ಯಾಕೋಬ 1:27; ಫಿಲಿ. 2:15:
3:15 [26] ವ. 9:
3:15 [27] ಅ. ಕೃ. 15:25:
3:15 [28] 1 ಕೊರಿ. 3:10:
3:15 [29] ರೋಮಾ. 2:4:
3:16 [30] ರೋಮಾ. 8:19; 1 ಕೊರಿ. 15:24; 1 ಥೆಸ. 4:15:
3:16 [31] ಯೆಶಾ. 28:13:
3:17 [32] 2 ಪೇತ್ರ. 1:12:
3:17 [33] 2 ಪೇತ್ರ. 1:10; 1:1 ಕೊರಿ. 10:12:
3:18 [34] 2 ಪೇತ್ರ. 1:5; ಎಫೆ. 4:15; ಕೊಲೊ. 1:10; 2:19; 1 ಪೇತ್ರ. 2:2:
3:18 [35] ರೋಮಾ. 11:36: