2 ಯೋಹಾನನು
Chapter 1
ಪೀಠಿಕೆ
1[1] ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ [2] ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ; 2 ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು [3] ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, [4] ಸತ್ಯವನ್ನು [5] ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. 3[6] ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ.
ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ
4 ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು [7] ಬಹಳ ಸಂತೋಷಪಟ್ಟೆನು. 5 ಅಮ್ಮನವರೇ, [8] ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು [9] ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ. 6[10] ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, [11] ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ. 7 ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ [12] ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ [13] ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ. 8[14] ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, [15] ಕಳೆದುಕೊಳ್ಳದೆ [16] ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ. 9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ [17] . ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೂನ್ಯತೆ ಇರುತ್ತದೆ. 10 ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ [18] ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. 11 ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
ಕೊನೆಯಮಾತುಗಳು
12[19] ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, [20] ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. [21] ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು. 13 ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ.