ಕನ್ನಡ (Kannada): Indian Revised Version - Kannada

Updated ? hours ago # views See on DCS

ಮತ್ತಾಯನು ಬರೆದ ಸುವಾರ್ತೆ

Chapter 1

ಯೇಸು ಕ್ರಿಸ್ತನ ವಂಶಾವಳಿ

1 ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ 2 ಅಬ್ರಹಾಮನ ಮಗನು ಇಸಾಕನು ಇಸಾಕನ ಮಗನು ಯಾಕೋಬನು ಯಾಕೋಬನ ಮಗನು ಯೆಹೂದನು ಅವನ ಅಣ್ಣತಮ್ಮಂದಿರು ಯೆಹಹೂದನ ಮಕ್ಕಳು 3 ಯೆಹೂದನಿಗೆ ತಾಮಾರಳಲ್ಲಿ ಪೆರೆಚನನು ಜೆರಹನನು ಹುಟ್ಟಿದರು ಪೆರೆಚನ ಮಗನು ಹೆಚ್ರೋನನು 4 ಹೆಚ್ರೋನನ ಮಗನು ಅರಾಮನು ಅರಾಮನ ಮಗನು ಅಮ್ಮಿನಾದಾಬನು ಅಮ್ಮಿನಾದಾಬನ ಮಗನು ನಹಶೋನು ನಹಶೋನ ಮಗನು ಸಲ್ಮೋನನು 5 ಸಲ್ಮೋನನ ಮಗನು ಬೋವಜನು ರಾಹಾಬಳಲ್ಲಿ ಹುಟ್ಟಿದವನು ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು ಓಬೇದನ ಮಗನು ಇಷಯನು 6 ಇಷಯನ ಮಗನು ಅರಸನಾದ ದಾವೀದನು ದಾವೀದನ ಮಗನು ಸೊಲೊಮೋನನು ಊರೀಯನ ಹೆಂಡತಿಯಿಂದ ಹುಟ್ಟಿದವನು 7 ಸೊಲೊಮೋನನ ಮಗನು ರೆಹಬ್ಬಾಮನು ರೆಹಬ್ಬಾಮನ ಮಗನು ಅಬೀಯನನು ಅಬೀಯನ ಮಗನು ಆಸನು 8 ಆಸನ ಮಗನು ಯೆಹೋಷಾಫಾಟನು ಯೆಹೋಷಾಫಾಟನ ಮಗನು ಯೆಹೋರಾಮನು ಯೆಹೋರಾಮನ ಮಗನು ಉಜ್ಜೀಯನು 9 ಉಜ್ಜೀಯನ ಮಗನು ಯೋತಾಮನನು ಯೋತಾಮನ ಮಗನು ಆಹಾಜನನು ಆಹಾಜನ ಮಗನು ಹಿಜ್ಕೀಯನು 10 ಹಿಜ್ಕೀಯನ ಮಗನು ಮನಸ್ಸೆಯನು ಮನಸ್ಸೆಯ ಮಗನು ಆಮೋನನು 11 ಆಮೋನ ಮಗನು ಯೋಷಿಯನು ಬಾಬೆಲೋನಿಗೆ ಸೆರೆಹೋದ ಸಮಯದಲ್ಲಿ ಯೋಷಿಯನಿಗೆ ಯೆಕೊನ್ಯನು ಅವನ ಅಣ್ಣತಮ್ಮಂದಿರು ಹುಟ್ಟಿದರು 12 ಬಾಬೆಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು 13 ಜೆರುಬ್ಬಾಬೆಲನ ಮಗನು ಅಬಿಹೂದನು ಅಬಿಹೂದನ ಮಗನು ಎಲ್ಯಕೀಮದನು ಎಲ್ಯಕೀಮನ ಮಗನು ಅಜೋರನು 14 ಅಜೋರನ ಮಗನು ಸದೋಕನು ಸದೋಕನ ಮಗನು ಅಖೀಮನು ಅಖೀಮನ ಮಗನು ಎಲಿಹೂದನು 15 ಎಲಿಹೂದನ ಮಗನು ಎಲಿಯಾಜರನು ಎಲಿಯಾಜರನ ಮಗನು ಮತ್ತಾನನು ಮತ್ತಾನನ ಮಗನು ಯಾಕೋಬನು 16 ಯಾಕೋಬನ ಮಗನು ಯೋಸೇಫನು ಯೋಸೇಫನು ಮರಿಯಳ ಗಂಡನು ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು 17 ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು 18 ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು 19 ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು 20 ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು ದಾವೀದನ ಮಗನಾದ ಯೋಸೇಫನೇ ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ 21 ಆಕೆಯು ಒಬ್ಬ ಮಗನನ್ನು ಹೆರುವಳು ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು ಅಂದನು 22 ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು ಆ ಮಾತು ಏನೆಂದರೆ 23 ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ 24 ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು 25 ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು ಮತ್ತು ಯೋಸೇಫನು ಆ ಮಗುವಿಗೆ ಯೇಸು ಎಂದು ಹೆಸರಿಟ್ಟನು

Chapter 2

ಜ್ಞಾನಿಗಳು ಪೂರ್ವದಿಂದ ಬಂದು ಯೇಸುವಿಗೆ ನಮಸ್ಕರಿಸಿದ್ದು

1 ಅರಸನಾದ ಹೆರೋದನ ಕಾಲದಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು 2 ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು ಎಂದರು 3 ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು 4 ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ ಎಂದು ಅವರನ್ನು ಕೇಳಿದನು 5 ಅವರು ಅವನಿಗೆ ಯೂದಾಯದ ಬೇತ್ಲೆಹೇಮಿನಲ್ಲಿಯೇ ಏಕೆಂದರೆ 6 ಯೆಹೂದ ಸೀಮೆಯ ಬೇತ್ಲೆಹೇಮೇ ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ ಎಂದು ಹೇಳಿದರು 7 ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು 8 ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು 9 ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು 10 ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು 11 ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು 12 ದೇವರು ಕನಸಿನಲ್ಲಿ ಅವರಿಗೆ ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು 13 ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು ನೀನು ಎದ್ದು ಕೂಸನ್ನೂ ತಾಯಿಯನ್ನೂ ಕರದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು ನಾನು ನಿನಗೆ ಹೇಳುವ ತನಕ ಅಲ್ಲೇ ಇರು ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು ಎಂದನು 14 ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು 15 ಹೀಗೆ ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು 16 ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರುಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು 17 ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು ಅದೇನಂದರೆ 18 ರಾಮದಲ್ಲಿ ಬೊಬ್ಬೆಯು ಕೇಳಿಸಿತು ಆಕ್ರಂದನವೂ ಬಹು ಗೋಳಾಟವೂ ಉಂಟಾದವು ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು ಎಂಬುದೇ 19 ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು 20 ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು ಎಂದು ಹೇಳಿದನು 21 ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು 22 ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು 23 ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು ಹೀಗೆ ಆತನು ನಜರೇತಿನವನೆಂದು ಕರೆಯಲ್ಪಡುವನು ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು

Chapter 3

ಸ್ನಾನಿಕನಾದ ಯೋಹಾನನ ಉಪದೇಶ

(ಮಾರ್ಕ 1:2-8; ಲೂಕ 3:1-18; ಯೋಹಾ. 1:6-8,19-34)

1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ 2 ಹೇಳಿದ್ದೇನೆಂದರೆ ಪಶ್ಚಾತ್ತಾಪಪಡಿರಿ ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ 3 ಕರ್ತನ ದಾರಿಯನ್ನು ಸಿದ್ಧಮಾಡಿರಿ ಆತನ ಮಾರ್ಗವನ್ನು ಸರಾಗ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವಿದೆ ಎಂಬುದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ 4 ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು 5 ಆಗ ಯೇರೂಸಲೇಮಿನವರು ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು 6 ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು 7 ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ ಎಲೈ ಸರ್ಪಸಂತತಿಯವರೇ ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು 8 ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ 9 ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ 10 ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ ಅದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು 11 ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು 12 ಹೊಟ್ಟನು ತೂರುವ ಮೊರವನ್ನುಆತನು ಕೈಯಲ್ಲಿ ಹಿಡಿದಿದ್ದಾನೆ ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು ಎಂದು ಹೇಳಿದನು 13 ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು 14 ಆತನಿಗೆ ಯೋಹಾನನು ತಡೆಯುತ್ತಾ ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು ಆದರೆ ನೀನು ನನ್ನ ಬಳಿಗೆ ಬರುವುದೇಕೆ ಎಂದು ಹೇಳಿದಕ್ಕೆ 15 ಯೇಸು ಪ್ರತ್ಯುತ್ತರವಾಗಿ ಅವನಿಗೆ ಸದ್ಯಕ್ಕೆ ಒಪ್ಪಿಕೋ ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು 16 ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ ಆತನಿಗಾಗಿ ಪರಲೋಕವು ತೆರೆಯಿತು ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು 17 ಆಗ ಈತನು ನನ್ನ ಪ್ರಿಯ ಮಗನು ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು

Chapter 4

ಸೈತಾನನು ಯೇಸುವನ್ನು ಶೋಧಿಸಿದ್ದು

(ಮಾರ್ಕ 1:12,13; ಲೂಕ 4:1-13)

1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು 2 ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು 3 ಆಗ ಸೈತಾನನು ಆತನ ಬಳಿಗೆ ಬಂದು ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು ಎಂದು ಹೇಳಲು 4 ಯೇಸು ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು ಎಂದು ಬರೆದಿದೆ ಅಂದನು 5 ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ 6 ಯೇಸುವಿಗೆ ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು ಎಂಬುದಾಗಿ ಬರೆದಿದೆಯಲ್ಲಾ ಎಂದು ಹೇಳಿದನು 7 ಅದಕ್ಕೆ ಯೇಸು ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ ಅಂದನು 8 ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ 9 ಯೇಸುವಿಗೆ ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು ಅಂದನು 10 ಯೇಸು ಅವನಿಗೆ ಸೈತಾನನೇ ನೀನು ತೊಲಗಿ ಹೋಗು ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು ಎಂಬುದಾಗಿ ಬರೆದಿದೆಯಲ್ಲಾ ಎಂದು ಹೇಳಿದನು 11 ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು 12 ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು 13 ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನನ ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು 14 ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು ಆ ಮಾತು ಏನೆಂದರೆ 15 ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ ಯೊರ್ದನಿನ ಆಚೆ ಸಮುದ್ರದ ಕಡೆಗಿರುವ ಸೀಮೆ ಅನ್ಯಜನಗಳಿರುವ ಗಲಿಲಾಯ ಸೀಮೆ 16 ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು ಎಂಬುದು 17 ಅಂದಿನಿಂದ ಯೇಸು ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು ಎಂದು ಸಾರುವುದಕ್ಕೆ ಪ್ರಾರಂಭಿಸಿದನು 18 ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು ಅವರು ಬೆಸ್ತರಾಗಿದ್ದರು 19 ಅವರಿಗೆ ಆತನು ನನ್ನನ್ನು ಹಿಂಬಾಲಿಸಿರಿ ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು ಎಂದು ಹೇಳುತ್ತಲೇ 20 ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು 21 ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು ಆತನು ಅವರನ್ನು ಕರೆದನು 22 ಕೂಡಲೆ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು 23 ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು 24 ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು ಆತನು ಅವರನ್ನು ಸ್ವಸ್ಥಮಾಡಿದನು 25 ಗಲಿಲಾಯ ದೆಕಪೊಲಿ ಯೆರೂಸಲೇಮ್ ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು

Chapter 5

ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ

(ಲೂಕ 6:20-49; 11:1-4,9-13,33-36; 12:22-24,57-59; 16:17,18)

1 ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು 2 ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ 3 ಆತ್ಮದಲ್ಲಿ ಬಡವರಾಗಿರುವವರು ಧನ್ಯರು ಪರಲೋಕ ರಾಜ್ಯವು ಅವರದು 4 ದುಃಖಪಡುವವರು ಧನ್ಯರು ಅವರು ದೇವರಿಂದ ಸಮಾಧಾನ ಹೊಂದುವರು 5 ವಿನಯವುಳ್ಳವರು ಧನ್ಯರು ಅವರು ಭೂಮಿಗೆ ಬಾಧ್ಯರಾಗುವರು 6 ನೀತಿಗೆ ಹಸಿದು ಬಾಯಾರಿದವರು ಧನ್ಯರು ಅವರು ತೃಪ್ತರಾಗುವರು 7 ಕರುಣೆಯುಳ್ಳವರು ಧನ್ಯರು ಅವರು ಕರುಣೆ ಹೊಂದುವರು 8 ಶುದ್ಧ ಹೃದಯದವರು ಧನ್ಯರು ಅವರು ದೇವರನ್ನು ನೋಡುವರು 9 ಶಾಂತಿಗಾಗಿ ಶ್ರಮಿಸುವವರು ಧನ್ಯರು ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು 10 ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು ಪರಲೋಕ ರಾಜ್ಯವು ಅವರದು 11 ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು 12 ಸಂತೋಷಪಡಿರಿ ಉಲ್ಲಾಸಪಡಿರಿ ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ 13 ನೀವು ಭೂಮಿಗೆ ಉಪ್ಪಾಗಿದ್ದೀರಿ ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ 14 ನೀವು ಲೋಕಕ್ಕೆ ಬೆಳಕಾಗಿದ್ದೀರಿ ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು 15 ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ ದೀಪಸ್ತಂಭದ ಮೇಲೆಯೇ ಇಡುತ್ತಾರೆ ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು 16 ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು 17 ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ ನಿರರ್ಥಕಪಡಿಸಲು ಬಂದಿಲ್ಲ ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ 18 ನಿಮಗೆ ಸತ್ಯವಾಗಿ ಹೇಳುತ್ತೇನೆ ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ 19 ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು 20 ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ 21 ನರಹತ್ಯ ಮಾಡಬಾರದು ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ 22 ಆದರೆ ನಾನು ನಿಮಗೆ ಹೇಳುವುದೇನಂದರೆ ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು ತನ್ನ ಸಹೋದರನನ್ನು ನೋಡಿ ಎಲೈ ಮೂರ್ಖನೇ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು ಎಲೈ ನೀಚನೇ ಎಂದು ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು 23 ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ 24 ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು 25 ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ 26 ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ 27 ವ್ಯಭಿಚಾರ ಮಾಡಬಾರದೆಂದು ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ 28 ಆದರೆ ನಾನು ನಿಮಗೆ ಹೇಳುವುದೇನಂದರೆ ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ 29 ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ 30 ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ 31 ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ 32 ಆದರೆ ನಾನು ನಿಮಗೆ ಹೇಳುವುದೇನಂದರೆ ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ 33 ಮತ್ತು ನೀನು ಸುಳ್ಳಾಣೆಯಿಡಬಾರದು ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ ಹೇಳಿದೆ ಎಂದು ಕೇಳಿದ್ದೀರಷ್ಟೆ 34 ಆದರೆ ನಾನು ನಿಮಗೆ ಹೇಳುವುದೇನಂದರೆ ಆಣೆಯನ್ನೇ ಇಡಬೇಡಿರಿ ಆಕಾಶದ ಮೇಲೆ ಆಣೆ ಇಡಬೇಡಿರಿ ಅದು ದೇವರ ಸಿಂಹಾಸನವು 35 ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ ಅದು ಆ ಮಹಾ ರಾಜನ ಪಟ್ಟಣವಾಗಿದೆ 36 ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ 37 ಆದರೆ ನಿಮ್ಮ ಮಾತು ಹೌದಾದರೆ ಹೌದು ಅಲ್ಲವಾದರೆ ಅಲ್ಲ ಎಂದಿರಲಿ ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ 38 ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು ಎಂದು ಹೇಳಿರುವುದು ಕೇಳಿದ್ದೀರಷ್ಟೆ 39 ಆದರೆ ನಾನು ನಿಮಗೆ ಹೇಳುವುದೇನಂದರೆ ಕೆಡುಕನನ್ನು ವಿರೋಧಿಸಬೇಡ ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು 40 ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು 41 ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು 42 ನಿನ್ನನ್ನು ಕೇಳುವವನಿಗೆ ಕೊಡು ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ 43 ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ 44 ಆದರೆ ನಾನು ನಿಮಗೆ ಹೇಳುವುದೇನಂದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ 45 ಹೀಗೆ ಮಾಡಿದರೆ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ 46 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು ಸುಂಕದವರು ಹಾಗೆ ಮಾಡುವುದಿಲ್ಲವೇ 47 ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ 48 ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ

Chapter 6

ದಾನಧರ್ಮದ ವಿಧಾನ

1 ಜನರು ನೋಡಲಿ ಎಂದು ನಿಮ್ಮ ಧರ್ಮಕಾರ್ಯಗಳನ್ನು ಅವರ ಮುಂದೆ ಮಾಡಬಾರದು ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ 2 ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ 3 ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ 4 ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು 5 ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ 6 ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು 7 ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ 8 ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ 9 ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು 10 ಪರಲೋಕದಲ್ಲಿರುವ ನಮ್ಮ ತಂದೆಯೇ ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ ನಿನ್ನ ರಾಜ್ಯವು ಬರಲಿ ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ 11 ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು 12 ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ತಪ್ಪುಗಳನ್ನು ಕ್ಷಮಿಸು 13 ನಮ್ಮನ್ನು ಶೋಧನೆಯೊಳಗೆ ಸೇರಿಸದೆ 14 ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು 15 ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ 16 ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ 17 ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ 18 ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು 19 ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ ಇಲ್ಲಿ ಅದು ನುಸಿ ಹಿಡಿದು ಕಿಲುಬು ಹತ್ತಿ ಕೆಟ್ಟುಹೋಗುವುದು ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು 20 ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ ಅಲ್ಲಿ ಅದು ನುಸಿ ಹಿಡಿದು ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ ಕದಿಯುವುದೂ ಇಲ್ಲ 21 ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಹೃದಯ ಇರುತ್ತದಷ್ಟೆ 22 ಕಣ್ಣು ದೇಹಕ್ಕೆ ದೀಪವಾಗಿದೆ ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು 23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು 24 ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ 25 ಈ ಕಾರಣದಿಂದ ನಮ್ಮ ಜೀವನಕ್ಕೆ ಏನು ಊಟಮಾಡಬೇಕು ಏನು ಕುಡಿಯಬೇಕು ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ 26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ ಅವು ಬಿತ್ತುವುದಿಲ್ಲ ಕೊಯ್ಯುವುದಿಲ್ಲ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ 27 ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು 28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ ಅವು ದುಡಿಯುವುದಿಲ್ಲ ನೂಲುವುದಿಲ್ಲ 29 ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ 30 ಎಲೈ ಅಲ್ಪ ವಿಶ್ವಾಸಿಗಳೇ ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ 31 ಹೀಗಿರುವುದರಿಂದ ಏನು ಊಟಮಾಡಬೇಕು ಏನು ಕುಡಿಯಬೇಕು ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ 32 ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ 33 ಹೀಗಿರುವುದರಿಂದ ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು 34 ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು

Chapter 7

ಇತರರ ಬಗ್ಗೆ ನ್ಯಾಯತೀರ್ಪು ಮಾಡಬೇಡಿ

1 ತೀರ್ಪುಮಾಡಬೇಡಿರಿ ಹಾಗೆ ನಿಮಗೂ ತೀರ್ಪಾಗುವುದಿಲ್ಲ 2 ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು 3 ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ 4 ನೀನು ನಿನ್ನ ಸಹೋದರನಿಗೆ ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ ಎಂದು ಏಕೆ ಹೇಳುವೇ ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ 5 ಕಪಟಿಯೇ ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು 6 ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು 7 ಬೇಡಿಕೊಳ್ಳಿರಿ ನಿಮಗೆ ದೊರೆಯುವುದು ಹುಡುಕಿರಿ ನಿಮಗೆ ಸಿಕ್ಕುವುದು ತಟ್ಟಿರಿ ನಿಮಗೆ ತೆರೆಯುವುದು 8 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು ಹುಡುಕುವವನಿಗೆ ಸಿಕ್ಕುವುದು ತಟ್ಟುವವನಿಗೆ ತೆರೆಯಲ್ಪಡುವುದು 9 ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ 10 ಮೀನು ಕೇಳಿದರೆ ಹಾವನ್ನು ಕೊಡುವನೋ 11 ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ 12 ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ ಧರ್ಮಶಾಶ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ 13 ನಾಶಕ್ಕೆ ಹೋಗುವ ಬಾಗಿಲು ದೊಡ್ಡದು ದಾರಿ ವಿಶಾಲವಾದುದು ಅದರಲ್ಲಿ ಹೋಗುವವರು ಬಹು ಜನ 14 ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು ದಾರಿ ಬಿಕ್ಕಟ್ಟು ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ ಆದುದರಿಂದ ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ 15 ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ 16 ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ 17 ಹಾಗೆಯೇ ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು 18 ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು 19 ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ 20 ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ 21 ನನ್ನನ್ನು ಕರ್ತನೇ ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು 22 ಕರ್ತನೇ ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತಿರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು 23 ಆಗ ನಾನು ಅವರಿಗೆ ನಿಮ್ಮ ಗುರುತೇ ನನಗಿಲ್ಲ ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿಹೋಗಿರಿ ಎಂದು ಹೇಳಿಬಿಡುವೆನು 24 ಆದುದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು 25 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು ಪ್ರವಾಹವು ಬಂದವು ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ 26 ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು 27 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು ಪ್ರವಾಹವು ಬಂದವು ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು ಆ ಕುಸಿತ ಅಗಾಧವಾದುದು 28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು 29 ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು

Chapter 8

ಯೇಸು ದಯವುಳ್ಳ ಅದ್ಭುತಕಾರ್ಯಗಳನ್ನು ಮಾಡಿ ತನ್ನ ಮಹಿಮೆಯನ್ನು ತೋರಿಸಿದ್ದು (8:2-9,34)

ಕುಷ್ಠರೋಗಿಯನ್ನು ಸ್ವಸ್ಥ ಮಾಡಿದ್ದು (ಮಾರ್ಕ 1:40-44; ಲೂಕ 5:12-14)

1 ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು 2 ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು ಕರ್ತನೇ ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಅಂದನು 3 ಆತನು ಕೈಚಾಚಿ ಆತನನ್ನು ಮುಟ್ಟಿ ನನಗೆ ಮನಸ್ಸುಂಟು ಶುದ್ಧವಾಗು ಅಂದನು ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು 4 ಆಗ ಯೇಸು ಅವನಿಗೆ ನೋಡು ಯಾರಿಗೂ ಹೇಳಬೇಡ ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು 5 ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು 6 ಕರ್ತನೇ ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ ಎಂದು ಹೇಳಿದನು 7 ಯೇಸು ಅವನಿಗೆ ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ ಎಂದು ಹೇಳಲು 8 ಆ ಶತಾಧಿಪತಿಯು ಕರ್ತನೇ ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ ನೀನು ಒಂದು ಮಾತು ಹೇಳಿದರೆ ಸಾಕು ನನ್ನ ಆಳಿಗೆ ಗುಣವಾಗುವುದು 9 ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಅಂದನು 10 ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು ತನ್ನ ಹಿಂದೆ ಬರುತ್ತಿದ್ದವರಿಗೆ ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು 11 ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ ಇಸಾಕ ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು 12 ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು ಎಂದು ಹೇಳಿದನು 13 ಬಳಿಕ ಯೇಸು ಆ ಶತಾಧಿಪತಿಗೆ ನೀನು ನಂಬಿದಂತೆ ನಿನಗಾಗಲಿ ಹೋಗು ಎಂದು ಹೇಳಿದನು ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು 14 ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ 15 ಜ್ವರವು ಆಕೆಯನ್ನು ಬಿಟ್ಟುಹೋಯಿತು ಆಕೆ ಎದ್ದು ಆತನಿಗೆ ಉಪಚಾರಮಾಡಿದಳು 16 ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು 17 ಇದರಿಂದ ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು 18 ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು 19 ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ ಗುರುವೇ ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ ಎಂದು ಹೇಳಲು 20 ಯೇಸು ಅವನಿಗೆ ನರಿಗಳಿಗೆ ಗುದ್ದುಗಳಿವೆ ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು 21 ಶಿಷ್ಯರಲ್ಲಿ ಬೇರೊಬ್ಬನು ಕರ್ತನೇ ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು ಅನ್ನಲಾಗಿ 22 ಯೇಸು ಅವನಿಗೆ ನನ್ನನ್ನು ಹಿಂಬಾಲಿಸು ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ ಎಂದು ಹೇಳಿದನು 23 ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು 24 ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತ್ತೆ ಆಯಿತು ಆದರೆ ಯೇಸು ನಿದ್ರಿಸುತ್ತಿದ್ದನು 25 ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ ಕರ್ತನೇ ನಮ್ಮನ್ನು ಕಾಪಾಡು ಸಾಯುತ್ತಿದ್ದೇವೆ ಎಂದರು 26 ಆತನು ಅವರಿಗೆ ಅಲ್ಪ ವಿಶ್ವಾಸಿಗಳೇ ಏಕೆ ಹೆದರುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು 27 ಆ ಜನರು ಬೆರಗಾಗಿ ಈತನು ಎಂಥವನಾಗಿರಬಹುದು ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು 28 ಆ ಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು ಅವರು ಮಹಾಕ್ರುರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ 29 ಅವರು ದೇವರ ಕುಮಾರನೇ ನಮ್ಮ ಗೊಡವೆ ನಿನಗೇಕೆ ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ ಎಂದು ಕೂಗಿದರು 30 ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು 31 ಆ ದೆವ್ವಗಳು ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು ಎಂದು ಬೇಡಿಕೊಂಡವು 32 ಆತನು ಅವುಗಳಿಗೆ ಹೋಗಿರಿ ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು 33 ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು 34 ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು

Chapter 9

1 ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು 2 ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ ಮಗನೇ ಧೈರ್ಯವಾಗಿರು ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು 3 ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು ಇವನು ದೇವದೂಷಣೆ ಮಾಡುತ್ತಾನೆಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು 4 ಯೇಸು ಅವರ ಆಲೋಚನೆಗಳನ್ನು ತಿಳಿದು ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ 5 ಯಾವುದು ಸುಲಭ ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಎಂದು ಅನ್ನುವುದೋ 6 ಅಥವಾ ಎದ್ದು ನಡೆ ಅನ್ನುವದೋ ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು ಎಂದು ಹೇಳಿ ಪಾರ್ಶ್ವವಾಯು ರೋಗಿಗೆ ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಅಂದನು 7 ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು 8 ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು 9 ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು 10 ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು 11 ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ ಎಂದು ಕೇಳಿದರು 12 ಯೇಸು ಅದನ್ನು ಕೇಳಿ ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ ಕ್ಷೇಮವಿಲ್ಲದವರಿಗೆ ಬೇಕು 13 ನೀವು ಹೋಗಿ ನಾನು ಯಜ್ಞವನ್ನಲ್ಲ ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು ಅಂದನು 14 ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ ಎಂದು ಕೇಳಿದರು ಅದಕ್ಕೆ ಯೇಸು ಅವರಿಗೆ 15 ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ ಆಗ ಅವರು ಉಪವಾಸಮಾಡುವರು ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ ಹಾಗೆ ಹಚ್ಚಿದರೆ 16 ಆ ತ್ಯಾಪೆಯು ಹಳೆ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು 17 ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳು ನಾಶವಾಗುವವು ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ ಆಗ ಎರಡೂ ಸಂರಕ್ಷಿಸಲ್ಪಡುವವು ಎಂದು ಹೇಳಿದನು 18 ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು ನನ್ನ ಮಗಳು ಈಗಲೇ ತೀರಿಹೋದಳು ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು ಎಂದು ಬೇಡಿಕೊಂಡನು 19 ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು 20 ಆಗ ಹನ್ನೆರಡು ವರುಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು 21 ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು 22 ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ ಮಗಳೇ ಧೈರ್ಯವಾಗಿರು ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು ಅಂದನು ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು 23 ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ 24 ಹೊರಗೆ ಹೋಗಿರಿ ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ ಅಂದನು ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು 25 ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು 26 ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು 27 ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು ದಾವೀದ ಕುಮಾರನೇ ನಮ್ಮನ್ನು ಕರುಣಿಸು ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು 28 ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು ಯೇಸು ಅವರನ್ನು ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ ಎಂದು ಕೇಳಿದ್ದಕ್ಕೆ ಅವರು ಹೌದು ಕರ್ತನೇ ನಂಬುತ್ತೇವೆ ಅಂದರು 29 ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ ಅಂದನು ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು 30 ನಂತರ ಯೇಸು ಅವರಿಗೆ ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು 31 ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು 32 ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು 33 ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು ಅದಕ್ಕೆ ಜನರು ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು ಆಶ್ಚರ್ಯಚಕಿತರಾದರು 34 ಆದರೆ ಫರಿಸಾಯರು ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ ಎಂದು ಹೇಳಿದರು 35 ತರುವಾಯ ಯೇಸು ಎಲ್ಲಾ ಪಟ್ಟಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು 36 ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು 37 ಆತನು ತನ್ನ ಶಿಷ್ಯರಿಗೆ ಬೆಳೆಯು ಬಹಳ ಇದೆ ಆದರೆ ಕೆಲಸದವರು ಸ್ವಲ್ಪ 38 ಆದುದರಿಂದ ಬೆಳೆಯ ಯಜಮಾನನನ್ನು ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ ಎಂದು ಹೇಳಿದನು

Chapter 10

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು 2 ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು ಅವನ ತಮ್ಮ ಅಂದ್ರೆಯ ಜೆಬೆದಾಯನ ಮಗ ಯಾಕೋಬ ಅವನ ತಮ್ಮನಾದ ಯೋಹಾನ 3 ಫಿಲಿಪ್ಪ ಬಾರ್ತೊಲೊಮಾಯ ತೋಮ ಸುಂಕ ವಸೂಲಿಗಾರನಾದ ಮತ್ತಾಯ ಅಲ್ಫಾಯನ ಮಗ ಯಾಕೋಬ ತದ್ದಾಯ 4 ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ ಎಂಬಿವರುಗಳೇ 5 ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ 6 ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ 7 ಪರಲೋಕ ರಾಜ್ಯವು ಸಮೀಪವಾಯಿತೆಂದು ಸಾರಿಹೇಳುತ್ತಾ ಹೋಗಿರಿ 8 ರೋಗಿಗಳನ್ನು ಸ್ವಸ್ಥಮಾಡಿರಿ ಸತ್ತವರನ್ನು ಬದುಕಿಸಿರಿ ಕುಷ್ಠರೋಗಿಗಳನ್ನು ಶುದ್ಧಮಾಡಿರಿ ದೆವ್ವಗಳನ್ನು ಬಿಡಿಸಿರಿ ಉಚಿತವಾಗಿ ಹೊಂದಿದ್ದೀರಿ ಉಚಿತವಾಗಿ ಕೊಡಿರಿ 9 ನಿಮ್ಮ ಕೈ ಚೀಲಗಳಲ್ಲಿ ಚಿನ್ನ ಹಣ ದುಡ್ಡುಗಳನ್ನೂ ದಾರಿಗೆ ಪ್ರಯಾಣದ ಚೀಲಗಳನ್ನೂ 10 ಎರಡು ಅಂಗಿ ಚಪ್ಪಲಿ ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ 11 ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ 12 ಆ ಮನೆಯೊಳಗೆ ಹೋಗುವಾಗ ಶುಭವಾಗಲಿ ಅನ್ನಿರಿ 13 ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ 14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ 15 ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ 16 ನೋಡಿರಿ ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ 17 ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು 18 ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ 19 ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು 20 ಮಾತನಾಡುವವರು ನೀವಲ್ಲ ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು 21 ಇದಲ್ಲದೆ ಸಹೋದರನು ಸಹೋದರನನ್ನು ತಂದೆಯು ಮಗನನ್ನು ಮರಣಕ್ಕೆ ಒಪ್ಪಿಸುವರು ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು 22 ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು 23 ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ 24 ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ ಒಡೆಯನಿಗಿಂತ ಆಳು ದೊಡ್ಡವನಲ್ಲ 25 ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು ಒಡೆಯನಂತೆ ಆಗುವುದು ಆಳಿಗೆ ಸಾಕು ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು 26 ಆದರೂ ಅವರಿಗೆ ಹೆದರಬೇಡಿರಿ ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ ಬೆಳಕಿಗೆ ಬಾರದ ರಹಸ್ಯವು ಇಲ್ಲ 27 ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ 28 ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ 29 ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು 30 ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ 31 ಆದುದರಿಂದ ಹೆದರಬೇಡಿರಿ ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ 32 ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು 33 ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು 34 ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ ಖಡ್ಗವನ್ನು ಹಾಕುವುದಕ್ಕೆ ಬಂದೆನು 35 ಹೇಗಂದರೆ ಮಗನಿಗೂ ತಂದೆಗೂ ಮಗಳಿಗೂ ತಾಯಿಗೂ ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು 36 ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ಶತ್ರುಗಳಾಗಿರುವರು 37 ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ 38 ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ 39 ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುವನು ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಾಪಾಡಿಕೊಳ್ಳುತ್ತಾನೆ 40 ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುವವನಾಗಿದ್ದಾನೆ ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುವವನಾಗಿದ್ದಾನೆ 41 ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು ನೀತಿವಂತನನ್ನು ನೀತಿವಂತನೆಂದು ಸ್ವಾಗತಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು 42 ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು

Chapter 11

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು 2 ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ 3 ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ ಎಂದು ಅವರ ಮೂಲಕ ಹೇಳಿ ಕೇಳಿಸಿದನು 4 ಯೇಸು ಅವರಿಗೆ ಪ್ರತ್ಯುತ್ತರವಾಗಿ ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ 5 ಕುರುಡರು ನೋಡುತ್ತಿದ್ದಾರೆ ಕುಂಟರು ನಡೆಯುತ್ತಿದ್ದಾರೆ ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ ಕಿವುಡರು ಕೇಳುತ್ತಿದ್ದಾರೆ ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ 6 ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು ಎಂದು ಹೇಳಿದನು 7 ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ ಗಾಳಿಯಿಂದ ಅಲ್ಲಾಡುವ ದಂಟನ್ನೋ 8 ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ 9 ಹಾಗಾದರೆ ಯಾತಕ್ಕೆ ಹೋಗಿದ್ದಿರಿ ಪ್ರವಾದಿಯನ್ನು ನೋಡುವುದಕ್ಕೋ ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ 10 ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ 11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ 12 ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ 13 ಎಲ್ಲಾ ಪ್ರವಾದಿಗಳೂ ಧರ್ಮನಿಯಮವು ಯೋಹಾನನ ತನಕ ಪ್ರವಾದಿಸಿದರು 14 ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ 15 ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ 16 ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ 17 ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ ಶೋಕಿಸಿದೆವು ನೀವು ಗೋಳಾಡಲಿಲ್ಲ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ 18 ಯೋಹಾನನು ಬಂದನು ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ ಅವರು ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ 19 ಮನುಷ್ಯಕುಮಾರನು ಬಂದನು ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು ಅವರು ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು ಅನ್ನುತ್ತಾರೆ ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ ಅಂದನು 20 ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು 21 ಹೇಗಂದರೆ ಅಯ್ಯೋ ಖೊರಾಜಿನೇ ಅಯ್ಯೋ ಬೇತ್ಸಾಯಿದವೇ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು 22 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು 23 ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ ಇಲ್ಲ ಪಾತಾಳಕ್ಕೆ ಇಳಿಯುವೆ ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು 24 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು ಎಂದು ನಿಮಗೆ ಹೇಳುತ್ತೇನೆ ಅಂದನು 25 ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ ತಂದೆಯೇ ಪರಲೋಕದ ಭೂಪಲೋಕದ ಒಡೆಯನೇ ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಂಥವರಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ 26 ಹೌದು ತಂದೆಯೇ ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು 27 ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ 28 ಎಲೈ ಕಷ್ಟಪಡುವವರೇ ಹೊರೆಹೊತ್ತವರೇ ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು 29 ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು 30 ಏಕೆಂದರೆ ನನ್ನ ನೊಗವು ಮೃದುವಾದದ್ದು ನನ್ನ ಹೊರೆಯು ಹಗುರವಾದದ್ದು ಆಗಿದೆ ಅಂದನು

Chapter 12

ಯೇಸು ಸಬ್ಬತ್ ದಿನವನ್ನು ಅಲಕ್ಷ್ಯಮಾಡುತ್ತಾನೆಂದು ಫರಿಸಾಯರು ಆತನ ಮೇಲೆ ಆಕ್ಷೇಪಣೆ ಮಾಡಿದ್ದು

(ಮಾರ್ಕ 2:23; 3:6; ಲೂಕ 6:1-11)

1 ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು 2 ಆದರೆ ಫರಿಸಾಯರು ಅದನ್ನು ಕಂಡು ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ ಎಂದು ಆತನಿಗೆ ಹೇಳಿದರು 3 ಆತನು ಅವರಿಗೆ ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ 4 ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು ಅವನ ಸಂಗಡ ಇದ್ದವರು ತಿಂದನಲ್ಲವೇ 5 ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ 6 ಆದರೆ ಇಲ್ಲಿ ದೇವಾಲಯಕ್ಕಿಂತ ದೊಡ್ಡವನು ಇದ್ದಾನೆಂದು ನಿಮಗೆ ಹೇಳುತ್ತೇನೆ 7 ನಾನು ಯಜ್ಞವನ್ನಲ್ಲ ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ 8 ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಕರ್ತನಾಗಿದ್ದಾನೆಂದು ಹೇಳಿದನು 9 ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರಕ್ಕೆ ಹೋದನು 10 ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ ಎಂದು ಕೇಳಿದರು 11 ಅದಕ್ಕಾತನು ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ 12 ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ ಎಂದು ಉತ್ತರ ಕೊಟ್ಟನು 13 ತರುವಾಯ ಯೇಸು ಆ ಮನುಷ್ಯನಿಗೆ ನಿನ್ನ ಕೈ ಚಾಚು ಎಂದು ಹೇಳಿದನು ಅವನು ಚಾಚಿದನು ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು 14 ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು 15 ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು 16 ಅನೇಕರು ಆತನ ಹಿಂದೆ ಹೋದರು ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತನ್ನ ಬಗ್ಗೆ ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು 17 ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು ಅದೇನೆಂದರೆ 18 ಇಗೋ ನಾನು ಆರಿಸಿಕೊಂಡ ನನ್ನ ಸೇವಕನು ನನ್ನ ಪ್ರಾಣಪ್ರಿಯನು ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು 19 ಈತನು ಜಗಳವಾಡುವುದಿಲ್ಲ ಕೂಗಾಡುವುದಿಲ್ಲ ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ 20 ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು 21 ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು 22 ದೆವ್ವ ಹಿಡಿದ ಕುರುಡನೂ ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು 23 ಅದಕ್ಕೆ ಜನರೆಲ್ಲರೂ ಬೆರಗಾಗಿ ಈತನು ದಾವೀದನ ಕುಮಾರನೇ ಇರಬಹುದೇನೋ ಎಂದು ಮಾತನಾಡಿಕೊಳ್ಳುತ್ತಿದ್ದರು 24 ಆದರೆ ಫರಿಸಾಯರು ಅದನ್ನು ಕೇಳಿ ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ ಅಂದರು 25 ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು ತನ್ನಲ್ಲಿ ಭೇಧ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು 26 ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು 27 ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು 28 ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ 29 ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು 30 ನನ್ನ ಸಂಗಡ ಇರದವನು ನನಗೆ ವಿರೋಧಿ ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ 31 ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ 32 ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ 33 ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ ಫಲದಿಂದಲೇ ಮರದ ಗುಣವು ಗೊತ್ತಾಗುವುದು 34 ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು 35 ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ 36 ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು 37 ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ ಅಂದನು 38 ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು ಬೋಧಕನೇ ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು ಯೇಸುವನ್ನು ಕೇಳಿದರು ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ 39 ವ್ಯಭಿಚಾರಿಣಿ ಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ 40 ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು 41 ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು ಇಗೋ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು 42 ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು ಇಗೋ ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು 43 ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ 44 ವಿಶ್ರಾಂತಿ ಸಿಕ್ಕದ ಕಾರಣ ಅದು ನಾನು ಬಿಟ್ಟು ಬಂದ ನನ್ನ ಮನೆಗೆ ತಿರುಗಿ ಹೋಗುತ್ತೇನೆ ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ ಗುಡಿಸಿ ಅಲಂಕರಿಸಿರುವುದನ್ನು ಕಂಡು 45 ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರದುಕೊಂಡು ಬರುವುದು ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು ಅಂದನು 46 ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು 47 ಆಗ ಒಬ್ಬನು ಇಗೋ ನಿನ್ನ ತಾಯಿಯೂ ತಮ್ಮಂದಿರೂ ನಿನ್ನನ್ನು ಮಾತನಾಡಿಸಬೇಕೆಂದು ಹೊರಗೆ ನಿಂತಿದ್ದಾರೆ ಅಂದನು 48 ಅದಕ್ಕಾತನು ಆ ಮಾತು ಹೇಳಿದವನಿಗೆ ನನ್ನ ತಾಯಿ ಯಾರು ನನ್ನ ಸಹೋದರರು ಯಾರು ಎಂದು ಹೇಳಿ 49 ಶಿಷ್ಯರ ಕಡೆಗೆ ಕೈ ಚಾಚಿ ಇಗೋ ನನ್ನ ತಾಯಿ ನನ್ನ ಸಹೋದರರು 50 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ ಅಂದನು

Chapter 13

ಪರಲೋಕ ರಾಜ್ಯವನ್ನು ಕುರಿತ ಸಾಮ್ಯಗಳು

(ಮಾರ್ಕ 4:1-20,30-34; ಲೂಕ 8:4-15; 13:18,19)

ಬಿತ್ತುವವನ ಸಾಮ್ಯ

1 ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು 2 ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು 3 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು 4 ಕೇಳಿರಿ ಬಿತ್ತುವವನು ಬಿತ್ತುವುದಕ್ಕೆ ಹೊರಟನು ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು 5 ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು 6 ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು 7 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು 8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು 9 ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು 10 ತರುವಾಯ ಆತನ ಶಿಷ್ಯರು ಬಂದು ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ ಎಂದು ಕೇಳಿದರು 11 ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ 12 ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು 13 ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ ಅವರು ಕಂಡರೂ ಕಾಣುವುದಿಲ್ಲ ಅವರು ಕೇಳಿದರೂ ಗ್ರಹಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ 14 ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ ಅದೇನಂದರೆ ನೀವು ಕೇಳುತ್ತೀರಿ ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ ನೀವು ನೋಡುತ್ತೀರಿ ನೋಡಿದರೂ ಗ್ರಹಿಸುವುದೇ ಇಲ್ಲ 15 ಈ ಜನರ ಹೃದಯವು ಮಂಕಾಯಿತು ಇವರ ಕಿವಿಗಳು ಮಂದವಾದವು ಇವರು ಕಣ್ಣು ಮುಚ್ಚಿಕೊಂಡಿದ್ದಾರೆ ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ ಎಂಬುದೇ 16 ಆದರೆ ನೀವು ಧನ್ಯರು ಏಕೆಂದರೆ ನಿಮ್ಮ ಕಣ್ಣುಗಳು ಕಾಣುತ್ತವೆ ನಿಮ್ಮ ಕಿವಿಗಳು ಕೇಳುತ್ತವೆ 17 ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ 18 ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ 19 ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು 20 ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ 21 ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ 22 ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ 23 ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ ಅರವತ್ತರಷ್ಟಾಗಲಿ ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ ಎಂದು ಹೇಳಿದನು 24 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು ಅದೇನಂದರೆ ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ 25 ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು 26 ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು 27 ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು ಎಂದು ಕೇಳಿದರು 28 ಅದಕ್ಕೆ ಅವನು ಇದು ವೈರಿ ಮಾಡಿದ ಕೆಲಸ ಎಂದು ಹೇಳಿದನು ಅದಕ್ಕೆ ಆಳುಗಳು ಅವನಿಗೆ ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮ್ಮಗೆ ಇಷ್ಟವಿದೆಯೋ ಎಂದು ಕೇಳಿದರು 29 ಅವರಿಗೆ ಅವನು ಬೇಡ ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ 30 ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು 31 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು ಅದೇನಂದರೆ ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು 32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ ಎಂದು ಹೇಳಿದನು 33 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು ಅದೇನಂದರೆ ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು 34 ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ 35 ಹೀಗೆ ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು 36 ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು ಆಗ ಆತನ ಶಿಷ್ಯರು ಆತನ ಬಳಿಗೆ ಬಂದು ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು 37 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು 38 ಹೊಲವೆಂದರೆ ಈ ಲೋಕ ಒಳ್ಳೆಯ ಬೀಜವೆಂದರೆ ರಾಜ್ಯದ ಮಕ್ಕಳು 39 ಕಳೆಯೆಂದರೆ ದುಷ್ಟನ ಮಕ್ಕಳು ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ ಕೊಯ್ಯುವವರು ಅಂದರೆ ದೇವದೂತರು 40 ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು 41 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು 42 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು 43 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು 44 ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು 45 ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ 46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು 47 ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ 48 ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು 49 ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು 50 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು 51 ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ ಎಂದು ಕೇಳಲು ಶಿಷ್ಯರು ಅರ್ಥವಾಯಿತು ಅಂದರು 52 ಆಗ ಆತನು ಅವರಿಗೆ ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಎಂದು ಹೇಳಿದನು 53 ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು 54 ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು 55 ಇವನು ಆ ಬಡಗಿಯ ಮಗನಲ್ಲವೇ ಇವನ ತಾಯಿ ಮರಿಯಳೆಂಬುವವಳಲ್ಲವೇ ಯಾಕೋಬ ಯೋಸೇಫ ಸೀಮೋನ ಯೂದ ಇವರು ಇವನ ತಮ್ಮಂದಿರಲ್ಲವೇ 56 ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು ಎಂದು ಅಂದುಕೊಂಡು ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು 57 ಆದರೆ ಯೇಸುವು ಅವರಿಗೆ ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ ಅಂದನು 58 ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ

Chapter 14

ಹೆರೋದನು ಸ್ನಾನಿಕನಾದ ಯೋಹಾನನ್ನು ಕೊಲ್ಲಿಸಿದ ಮೇಲೆ ಯೇಸುವಿನ ಸುದ್ದಿಯನ್ನು ಕೇಳಿ ದಿಗಿಲುಪಟ್ಟದ್ದು

(ಮಾರ್ಕ 6:14-29; ಲೂಕ 9:7-9)

1 ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ 2 ತನ್ನ ಸೇವಕರಿಗೆ ಇವನು ಸ್ನಾನಿಕ ಯೋಹಾನನೇ ಸತ್ತವರೊಳಗಿಂದ ಎದ್ದು ಬಂದಿದ್ದಾನೆ ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ ಎಂದು ಹೇಳಿದನು 3 ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು 4 ಯೋಹಾನನು ಹೆರೋದನಿಗೆ ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು ಹೇಳುತ್ತಿದ್ದನು 5 ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು 6 ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು 7 ಅವನು ಅವಳಿಗೆ ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಅಣೆಯಿಟ್ಟು ವಾಗ್ದಾನ ಮಾಡಿದನು 8 ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು ಅಂದಳು 9 ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಅಣೆಯ ನಿಮಿತ್ತವಾಗಿಯೂ ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು 10 ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ 11 ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು 12 ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು 13 ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು 14 ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು 15 ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು ಎಂದು ಹೇಳಿದರು 16 ಆದರೆ ಯೇಸು ಅವರು ಹೋಗುವ ಅಗತ್ಯವಿಲ್ಲ ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ ಅಂದನು 17 ಅದಕ್ಕವರು ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ ಅನ್ನಲಾಗಿ 18 ಆತನು ಅವುಗಳನ್ನು ನನಗೆ ತಂದು ಕೊಡಿರಿ ಅಂದನು 19 ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು ಶಿಷ್ಯರು ಜನರ ಕೊಟ್ಟರು 20 ಅವರೆಲ್ಲರೂ ಊಟಮಾಡಿ ತೃಪ್ತರಾದರು ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು 21 ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು 22 ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು 23 ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು 24 ಆದರೆ ದೋಣಿಯು ಸಮುದ್ರದ ನಡುವೆಯಿತ್ತು ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು 25 ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು 26 ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು ಭೂತವೆಂದು ದಿಗಿಲುಬಿದ್ದು ಭಯದಿಂದ ಕೂಗಿದರು 27 ಕೂಡಲೆ ಯೇಸು ಮಾತನಾಡಿ ಅವರಿಗೆ ಧೈರ್ಯವಾಗಿರಿ ನಾನೇ ಭಯಪಡಬೇಡಿರಿ ಎಂದು ಹೇಳಿದನು 28 ಅದಕ್ಕೆ ಪೇತ್ರನು ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು ಅನ್ನಲು 29 ಆತನು ಬಾ ಅಂದನು ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು 30 ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ ಕರ್ತನೇ ನನ್ನನ್ನು ಕಾಪಾಡು ಎಂದು ಕೂಗಿಕೊಂಡನು 31 ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ ಎಂದು ಹೇಳಿದನು 32 ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು 33 ಆಗ ದೋಣಿಯಲ್ಲಿದ್ದ ಶಿಷ್ಯರು ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನನ್ನು ಆರಾಧಿಸಿದರು 34 ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು 35 ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು 36 ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು

Chapter 15

ಊಟದಿಂದ ಮನುಷ್ಯನು ಕೆಡುವುದಿಲ್ಲವೆಂದು ಯೇಸು ಬೋಧಿಸಿದ್ದು

(ಮಾರ್ಕ 7:1-23)

1 ತರುವಾಯ ಯೆರೂಸಲೇಮಿನಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು 2 ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ ಎಂದು ಕೇಳಿದರು 3 ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ 4 ಹೇಗಂದರೆ ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ ದೇವರು ಹೇಳಿದ್ದಾನೆ 5 ನೀವೋ ಯಾವನಾದರೂ ತನ್ನ ತಂದೆಯನಾಗಲಿ ತಾಯಿಯಾನಾಗಲಿ ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ ಎಂದು ಹೇಳಿದರೆ 6 ಅವನು ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ ಅನ್ನುತ್ತೀರಿ ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ 7 ಕಪಟಿಗಳೇ ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ ಅವನು ಹೇಳಿರುವುದೇನೆಂದರೆ 8 ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ 9 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು ಎಂಬುದೇ 10 ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ ಕೇಳಿ ತಿಳಿದುಕೊಳ್ಳಿರಿ 11 ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು ಎಂದು ಹೇಳಿದನು 12 ಆಗ ಶಿಷ್ಯರು ಬಂದು ಆತನನ್ನು ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ ಎಂದು ಕೇಳಿದರು 13 ಅದಕ್ಕೆ ಆತನು ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲ್ಪಡುವವು 14 ಅವರನ್ನು ಬಿಡಿರಿ ಅವರು ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು ಅಂದನು 15 ಆಗ ಪೇತ್ರನು ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು ಅಂದನು 16 ಅದಕ್ಕೆ ಯೇಸು ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ 17 ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ 18 ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ ಇವೇ ಮನುಷ್ಯನನ್ನು ಅಶುದ್ಧಿಮಾಡುವವು 19 ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು ಕೊಲೆ ವ್ಯಭಿಚಾರ ಜಾರತ್ವ ಕಳ್ಳತನ ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ 20 ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ ಅಂದನು 21 ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತಗಳಿಗೆ ಹೋದನು 22 ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು ಕರ್ತನೇ ದಾವೀದನ ಕುಮಾರನೇ ನನ್ನ ಮೇಲೆ ಕರುಣೆಯಿಡು ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ ಎಂದು ಕೂಗಿಕೊಂಡಳು 23 ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ ಆಗ ಆತನ ಶಿಷ್ಯರು ಬಂದು ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ ಆಕೆಯನ್ನು ಕಳುಹಿಸಿಬಿಡು ಎಂದು ಆತನನ್ನು ಬೇಡಿಕೊಂಡರು 24 ಆದರೆ ಯೇಸು ಹೇಳಿದ್ದೇನೆಂದರೆ ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ ಅಂದನು 25 ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು ಕರ್ತನೇ ನನಗೆ ಸಹಾಯಮಾಡು ಅಂದಳು 26 ಅದಕ್ಕಾತನು ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ ಎಂದು ಉತ್ತರಕೊಟ್ಟನು 27 ಆಕೆಯು ಹೌದು ಕರ್ತನೇ ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ ಅಂದಳು 28 ಆಗ ಯೇಸು ಆಕೆಗೆ ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು ನಿನ್ನ ಇಷ್ಟದಂತೆಯೇ ನಿನಗಾಗಲಿ ಎಂದು ಉತ್ತರಕೊಟ್ಟನು ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು 29 ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು 30 ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು ಕುರುಡರು ಮೂಕರು ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು ಆತನು ಅವರನ್ನು ಸ್ವಸ್ಥಮಾಡಿದನು 31 ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ ಕುಂಟರು ನಡೆದಾಡುವುದನ್ನೂ ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು 32 ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ ಅವರು ದಾರಿಯಲ್ಲಿ ಬಳಲಿ ಹೋದಾರು ಎಂದು ಹೇಳಿದನು 33 ಶಿಷ್ಯರು ಆತನಿಗೆ ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು ಎಂದು ಹೇಳಿದರು 34 ಅದಕ್ಕೆ ಯೇಸು ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ ಅಂದರು 35 ಆಗ ಆತನು ಜನರ ಗುಂಪಿಗೆ ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು 36 ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು ಶಿಷ್ಯರು ಜನರಿಗೆ ಹಂಚಿಕೊಟ್ಟರು 37 ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು 38 ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು 39 ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು

Chapter 16

ಫರಿಸಾಯರು ಮತ್ತು ಸದ್ದುಕಾಯರು ಸೂಚಕಕಾರ್ಯವನ್ನು ಕೇಳಿದ್ದು

(ಮಾರ್ಕ 9:11-21)

1 ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು 2 ಆತನು ಅವರಿಗೆ ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ ಅನ್ನುತ್ತೀರಿ 3 ಬೆಳಗ್ಗೆ, <ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ> ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ? 4 ವ್ಯಭಿಚಾರಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ ಎಂದು ಉತ್ತರ ಕೊಟ್ಟನು ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು 5 ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು 6 ಯೇಸು ಅವರಿಗೆ ಎಚ್ಚರಿಕೆ ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಎಂದು ಹೇಳಿದನು 7 ಅದಕ್ಕೆ ಅವರು ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು 8 ಯೇಸು ಅದನ್ನು ತಿಳಿದು ಅಲ್ಪ ವಿಶ್ವಾಸಿಗಳೇ ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ 9 ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ 10 ಇಲ್ಲವೆ ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ ನೀವು ಇನ್ನೂ ಗ್ರಹಿಸಲಿಲ್ಲವೇ ನಿಮಗೆ ನೆನಪಿಲ್ಲವೇ 11 ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ ಎಂಬುದು ನಿಮಗೆ ಹೇಗೆ ತಿಳಿಯದು ಆದರೆ ನಾನು ನಿಮಗೆ ಹೇಳಿದು ಏನೆಂದರೆ ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ ಅಂದನು 12 ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು 13 ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತಕ್ಕೆ ಬಂದಾಗ ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ ಎಂದು ತನ್ನ ಶಿಷ್ಯರನ್ನು ಕೇಳಿದನು 14 ಅವರು ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು 15 ಆತನು ಅವರನ್ನು ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು 16 ಆಗ ಸೀಮೋನ ಪೇತ್ರನು ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು ಎಂದು ಉತ್ತರ ಕೊಟ್ಟನು 17 ಅದಕ್ಕೆ ಯೇಸು ಯೋನನ ಮಗನಾದ ಸೀಮೋನನೇ ನೀನು ಧನ್ಯನು ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು ಎಂದು ಹೇಳಿದನು 18 ನಾನು ಇದನ್ನು ಸಹ ನಿನಗೆ ಹೇಳುತ್ತೇನ ನೀನು ಪೇತ್ರನು ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು 19 ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು ಅಂದನು 20 ಆಗ ಆತನು ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು 21 ಅಂದಿನಿಂದ ಯೇಸು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು 22 ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ ಕರ್ತನೇ ದೇವರು ಅದನ್ನು ನಿನಗೆ ಬರಗೊಡಿಸದಿರಲಿ ನಿನಗೆ ಹೀಗೆ ಎಂದಿಗೂ ಆಗಬಾರದು ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು 23 ಆತನು ತಿರುಗಿಕೊಂಡು ಪೇತ್ರನಿಗೆ ಸೈತಾನನೇ ನನ್ನನ್ನು ಬಿಟ್ಟು ತೊಲಗಿ ಹೋಗು ನನಗೆ ನೀನು ಅಡ್ಡಿಯಾಗಿದ್ದಿ ಏಕೆಂದರೆ ನೀನು ದೇವರ ವಿಷಯಗಳಹಾಗೇ ಯೋಚಿಸದೇ ಮನುಷ್ಯರ ವಿಷಯಗಳಂತ್ತೆ ಯೋಚಿಸುತ್ತೀ ಎಂದು ಹೇಳಿದನು 24 ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ 25 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು 26 ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು 27 ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು 28 ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ ಅಂದನು

Chapter 17

ಯೇಸು ರೂಪಾಂತರಗೊಂಡಿದ್ದು

(ಮಾರ್ಕ 9:2-13; ಲೂಕ 9:28-36)

1 ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು 2 ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು 3 ಇಗೋ ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು 4 ಆಗ ಪೇತ್ರನು ಯೇಸುವಿಗೆ ಕರ್ತನೇ ನಾವು ಇಲ್ಲೇ ಇರುವುದು ಒಳ್ಳೆಯದು ನೀನು ಬಯಸುವುದಾದರೆ ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು ನಿನಗೊಂದು ಮೋಶೆಗೊಂದು ಎಲೀಯನಿಗೊಂದು ಎಂದು ಹೇಳಿದನು 5 ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು ಇದಲ್ಲದೆ ಆ ಮೋಡದೊಳಗಿನಿಂದ ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ ಎಂದು ಹೇಳುವ ವಾಣಿವುಂಟಾಯಿತು 6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು 7 ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ ಏಳಿರಿ ಹೆದರಬೇಡಿರಿ ಅಂದನು 8 ಅವರು ಕಣ್ಣೆತ್ತಿ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ 9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದೆಂದು ಆಜ್ಞಾಪಿಸಿದನು 10 ಆಗ ಆತನ ಶಿಷ್ಯರು ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ ಎಂದು ಆತನನ್ನು ಕೇಳಿದರು 11 ಯೇಸು ಅವರಿಗಎಲೀಯನು ಮೊದಲು ಬರುವುದು ನಿಜ ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು 12 ಆದರೆ ನಾನು ನಿಮಗೆ ಹೇಳುತ್ತೇನೆ ಎಲೀಯನು ಬಂದಾಯಿತು ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು ಎಂದು ಉತ್ತರ ಕೊಟ್ಟನು 13 ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು 14 ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ 15 ಕರ್ತನೇ ನನ್ನ ಮಗನನ್ನು ಕರುಣಿಸು ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ ಅನೇಕ ಬಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ 16 ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ ಅಂದನು 17 ಅದಕ್ಕೆ ಯೇಸು ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ ಅಂದನು 18 ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು 19 ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು 20 ಆತನು ಅವರಿಗೆ ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ 21 ನೀವು ಈ ಬೆಟ್ಟಕ್ಕೆ, <ಇಲ್ಲಿಂದ ಅಲ್ಲಿಗೆ ಸರಿದು ಹೋಗು> ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ>> ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು. [1]

ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂತಿಳಿಸಿದ್ದು

(ಮಾರ್ಕ 9:30-32; ಲೂಕ 9:43-45)

22 ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು 23 ಅವರು ಆತನನ್ನು ಕೊಲ್ಲುವರು ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು 24 ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ ಎಂದು ಕೇಳಲು ಹೌದು ಕಟ್ಟುವನು ಅಂದನು 25 ಪೇತ್ರನು ಮನೆಯೊಳಗೆ ಬಂದಾಗ ಅವನು ಬಾಯಿ ತೆರೆದು ಮಾತನಾಡುವ ಮೊದಲೇ ಯೇಸು ಅವನುಗೆ ಸೀಮೋನನೇ ನಿನಗೆ ಹೇಗೆ ತೋರುತ್ತದೆ ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ ಎಂದು ಕೇಳಿದನು 26 ಅವನು ಪರರಿಂದ ಎಂದು ಉತ್ತರ ಕೊಡಲು ಯೇಸು ಅವನಿಗೆ ಹಾಗಾದರೆ ಪ್ರಜೆಗಳು ಅದ್ದನ್ನು ಕೊಡಬೇಕಾಗಿಲ್ಲವೇ 27 ಆದರೂ ನಾವು ಅವರಿಗೆ ಅಡ್ಡಿಯಾಗದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು ಎಂದು ಹೇಳಿದನು


17:21 [1] ಮೂಲ ಗ್ರಂಥದಲ್ಲಿ ಇಲ್ಲ. ಆದರೆ ಕೆಲವು ಪ್ರತಿಗಳಲ್ಲಿ, ಆತನು, ಈ ರೀತಿಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಮತ್ತು ಉಪವಾಸದಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.

Chapter 18

ದೇವರ ರಾಜ್ಯದಲ್ಲಿ ದೊಡ್ಡವನು

(ಮಾರ್ಕ 9:33-37; ಲೂಕ 9:46-48)

1 ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು ಎಂದು ಕೇಳಿದರು 2 ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ 3 ಅವರಿಗೆ ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ 4 ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು 5 ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ 6 ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ 7 ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ ತೊಡಕುಗಳು ಬರುವುದು ಅನಿವಾರ್ಯ ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ 8 ನಿನ್ನ ಕೈಯಾಗಲಿ ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು ಎರಡು ಕೈ ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ 9 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ 10 ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ 11 ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು. [1]

ಕಳೆದುಹೋದ ಕುರಿಯ ಸಾಮ್ಯ

12 ನಿಮ್ಮಲ್ಲಿ ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ ಆಗ ನಿಮಗೇನು ಅನ್ನಿಸುತ್ತದೆ ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ 13 ಅದು ಅವನಿಗೆ ಸಿಕ್ಕಿದರೆ ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ 14 ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ 15 ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ ಹೋಗಿ ನೀನೂ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ 16 ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರದುಕೊಂಡು ಹೋಗು 17 ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ 18 ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ 19 ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ 20 ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ ಅಂದನು 21 ಆಗ ಪೇತ್ರನು ಆತನ ಬಳಿಗೆ ಬಂದು ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು ಏಳು ಸಾರಿಯೋ ಎಂದು ಕೇಳಿದನು 22 ಯೇಸು ಅವನಿಗೆ ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ 23 ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ 24 ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು 25 ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು 26 ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ ಒಡೆಯನೇ ನನ್ನ ಮೇಲೆ ತಾಳ್ಮೆಯಿರಲಿ ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು ಹೇಳಿದನು 27 ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು 28 ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ ನನ್ನ ಸಾಲ ತೀರಿಸು ಎಂದು ಹೇಳಿದನು 29 ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ ಎಂದು ಬೇಡಿಕೊಂಡನು 30 ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು 31 ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು 32 ಆಗ ಅವನ ಒಡೆಯನು ಅವನನ್ನು ಕರಸಿ ಓ ದುಷ್ಟ ಸೇವಕನೇ ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ 33 ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ ಎಂದು ಹೇಳಿ 34 ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು 35 ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು ಅಂದನು


18:11 [1] 11 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಲೂಕ. 19:10 ನೋಡಿರಿ. ಮನುಷ್ಯಕುಮಾರನು ಕಳೆದುಹೋಗಿರುವುದನ್ನು ಹುಡುಕಿ ರಕ್ಷಿಸುವುದಕೋಸ್ಕರ ಬಂದನು.

Chapter 19

ಯೇಸು ವಿವಾಹ ವಿಚ್ಛೇದನ ವಿಷಯವಾಗಿ ಭೋದಿಸಿದ್ದು

(ಮಾರ್ಕ 10:1-12)

1 ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು 2 ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು 3 ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ ಎಂದು ಕೇಳಲು 4 ಆತನು ಪ್ರತ್ಯುತ್ತರವಾಗಿ ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು 5 ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ 6 ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು ಅಂದನು 7 ಅದಕ್ಕೆ ಅವರು ಆತನನ್ನು ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು ಎಂದು ಕೇಳಿದರು 8 ಅದಕ್ಕೆ ಯೇಸು ಅವರಿಗೆ ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು 9 ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ ಎಂದು ನಿಮಗೆ ಹೇಳುತ್ತೇನೆ ಅಂದನು 10 ಅದಕ್ಕೆ ಶಿಷ್ಯರು ಯೇಸುವಿಗೆ ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ ಅಂದರು 11 ಆದರೆ ಯೇಸು ಅವರಿಗೆ ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು 12 ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ ಎಂದು ಹೇಳಿದನು 13 ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು ಆದರೆ ಶಿಷ್ಯರು ಅವರನ್ನು ಗದರಿಸಿದರು 14 ಆದರೆ ಯೇಸು ಮಕ್ಕಳನ್ನು ಬಿಡಿರಿ ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ ಏಕೆಂದರೆ ಪರಲೋಕ ರಾಜ್ಯವು ಇಂಥವರದೇ ಎಂದು ಹೇಳಿದನು 15 ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು 16 ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು ಎಂದು ಕೇಳಿದನು 17 ಆತನು ಅವನಿಗೆ ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ ಒಳ್ಳೆಯವನು ಒಬ್ಬನೇ ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ ಎಂದು ಹೇಳಿದನು 18 ಅದಕ್ಕೆ ಅವನು ಅವು ಯಾವುವು ಎಂದು ಕೇಳಲು ಯೇಸು ನರಹತ್ಯ ಮಾಡಬಾರದು ವ್ಯಭಿಚಾರ ಮಾಡಬಾರದು ಕದಿಯಬಾರದು ಸುಳ್ಳು ಸಾಕ್ಷಿ ಹೇಳಬಾರದು 19 ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು ಇವುಗಳೇ ಅಂದನು 20 ಆ ಯೌವನಸ್ಥನು ಆತನಿಗೆ ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ ಇನ್ನೂ ನನಗೇನು ಕೊರತೆಯಾಗಿರಬಹುದು ಎಂದು ಕೇಳಿದನು 21 ಯೇಸು ಅವನಿಗೆ ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ ಹೋಗಿ ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು 22 ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು 23 ಆಗ ಯೇಸು ತನ್ನ ಶಿಷ್ಯರಿಗೆ ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ 24 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ ಅಂದನು 25 ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು ಎಂದು ಕೇಳಿದರು 26 ಯೇಸು ಅವರನ್ನು ದೃಷ್ಟಿಸಿ ನೋಡಿ ಇದು ಮನುಷ್ಯರಿಂದ ಅಸಾಧ್ಯ ಆದರೆ ದೇವರಿಗೆ ಎಲ್ಲವು ಸಾಧ್ಯವೇ ಅಂದನು 27 ಆಗ ಪೇತ್ರನು ಆತನನ್ನು ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು ಇದರಿಂದ ನಮಗೆ ಏನು ದೊರಕುವುದು ಎಂದು ಕೇಳಿದನು 28 ಯೇಸು ಅವರಿಗೆ ನಿಮಗೆ ಸತ್ಯವಾಗಿ ಹೇಳುತ್ತೇನೆ ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ 29 ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ ಸಹೋದರರನ್ನಾಗಲಿ ಸಹೋದರಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂಮಿಯನ್ನಾಗಲಿ ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು 30 ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು

Chapter 20

ದ್ರಾಕ್ಷಾತೋಟದ ಕೂಲಿಯಾಳುಗಳ ಸಾಮ್ಯ

1 ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ 2 ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು 3 ಅವನು ಪುನಃ ಸುಮಾರು ಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು 4 ಅವರಿಗೆ ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ ಅಂದನು ಆಗ ಅವರು ಕೆಲಸಕ್ಕೆ ಹೋದರು 5 ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತು ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು 6 ಮತ್ತೊಂದು ಸಾರಿ ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ ಎಂದು ಕೇಳಿದನು 7 ಅವರು ಅವನಿಗೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಎಂದರು ಆಗ ಅವನು ಅವರಿಗೆ ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ ಅಂದನು 8 ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು ಎಂದು ಹೇಳಿದನು 9 ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು 10 ಮೊದಲು ಬಂದವರು ಬಂದಾಗ ತಮಗೆ ಹೆಚ್ಚು ದೊರೆಯುವುದೆಂದು ನೆನಸಿದರು ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು 11 ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ 12 ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ ಅಂದರು 13 ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ 14 ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ 15 ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ ನಾನು ಉದಾರಿ ಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ ಎಂದು ಹೇಳಿದನು 16 ಹೀಗೆ ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು ಎಂದು ಹೇಳಿದನು 17 ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ 18 ನೋಡಿರಿ ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಗೊಪ್ಪಿಸಿಕೊಡುವರು ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು 19 ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು 20 ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು 21 ಆತನು ಆಕೆಯನ್ನು ನಿನ್ನ ಅಪೇಕ್ಷೆ ಏನು ಎಂದು ಕೇಳಲು ಆಕೆ ಆತನಿಗೆ ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು ಅಂದಳು 22 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ ಎಂದು ಕೇಲಳಿದನು ಅವರು ಆತನಿಗೆ ನಮ್ಮಿಂದ ಆಗುವುದು ಅಂದರು 23 ಆಗ ಆತನು ಅವರಿಗೆ ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು ಎಂದು ಹೇಳಿದನು 24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು 25 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ ಅನ್ಯಜನರ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು 26 ಆದರೆ ನಿಮ್ಮಲ್ಲಿ ಹಾಗಿರಬಾರದು ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ 27 ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ 28 ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ ಸೇವೆ ಮಾಡುವುದಕ್ಕೂ ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು ಎಂದು ಹೇಳಿದನು 29 ಅವರು ಯೆರಿಕೋವಿನಿಂದ ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು 30 ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ ಕರ್ತನೇ ದಾವೀದ ಕುಮಾರನೇ ನಮ್ಮನ್ನು ಕರುಣಿಸು ಎಂದು ಕೂಗಿಕೊಂಡರು 31 ಆದರೆ ಆ ಗುಂಪಿನವರು ಸುಮ್ಮನಿರಿ ಎಂದು ಅವರನ್ನು ಗದರಿಸಿದರು ಅವರಾದರೋ ಕರ್ತನೇ ದಾವೀದ ಕುಮಾರನೇ ನಮ್ಮನ್ನು ಕರುಣಿಸು ಎಂದು ಗಟ್ಟಿಯಾಗಿ ಕೂಗಿಕೊಂಡರು 32 ಆಗ ಯೇಸು ನಿಂತು ಅವರನ್ನು ಕರೆದು ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ ಎಂದು ಕೇಳಿದನು 33 ಅವರು ಕರ್ತನೇ ನಮ್ಮ ಕಣ್ಣುಗಳು ಕಾಣುವಂತೆ ಮಾಡು ಅಂದರು 34 ಆಗ ಯೇಸು ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು

Chapter 21

ಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದು

(ಮಾರ್ಕ 11:1-11; ಲೂಕ 10:29-40; ಯೋಹಾ. 12:12-19)

1 ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ 2 ಆತನು ಇಬ್ಬರು ಶಿಷ್ಯರನ್ನು ಕರೆದು ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ 3 ಯಾವನಾದರೂ ನಿಮಗೆ ಏನಾದರೂ ಹೇಳಿದರೆ ಇವು ನಮ್ಮ ಕರ್ತನಿಗೆ ಬೇಕಾಗಿವೆ ಎಂದು ನೀವು ಹೇಳಿರಿ ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು ಎಂದು ಹೇಳಿ ಕಳುಹಿಸಿದನು 4 ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದಾಯಿತು ಅದೇನೆಂದರೆ 5 ಚೀಯೋನ್ ಪುತ್ರಿಯೇ ನೋಡು ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು ಹೇಳಿರಿ ಎಂಬುದು 6 ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು 7 ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಯೇಸು ಹತ್ತಿ ಕುಳಿತುಕೊಂಡನು 8 ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು 9 ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು ದಾವೀದನ ಕುಮಾರನಿಗೆ ಹೊಸನ್ನ ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಹೊಸನ್ನ ಎಂದು ಆರ್ಭಟಿಸಿದರು 10 ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ ಈತನು ಯಾರು ಅಂದರು 11 ಅದಕ್ಕೆ ಆ ಗುಂಪಿನ ಜನರು ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು ಅಂದರು 12 ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು 13 ಆತನು ಅವರಿಗೆ ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ ಎಂದು ಬರೆದಿದೆ ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ ಎಂದು ಹೇಳಿದನು 14 ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು 15 ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು ದಾವೀದನ ಕುಮಾರನಿಗೆ ಹೊಸನ್ನ ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು 16 ಆತನಿಗೆ ಇವರು ಹೇಳುವುದನ್ನು ಕೇಳುತ್ತಿರುವೆಯಾ ಎಂದು ಹೇಳಲು ಯೇಸು ಹೌದು ಕೇಳುತ್ತಿದ್ದೇನೆ ಆದರೆ ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಪಡಿಸಿರುವಿ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಕೇಳಿದನು 17 ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು 18 ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು 19 ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ ಎಂದು ಹೇಳಿದನು ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು 20 ಶಿಷ್ಯರು ಅದನ್ನು ನೋಡಿ ಬೆರಗಾಗಿ ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ ಎಂದು ಆಚಾರ್ಯಗೊಂಡರು 21 ಅದಕ್ಕೆ ಯೇಸು ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೆ ಅದೂ ಆಗುವುದು 22 ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ ಅಂದನು 23 ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು 24 ಯೇಸು ಅವರಿಗೆ ಹೇಳಿದ್ದೇನೆಂದರೆ ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ 25 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ ಅಂದನು ಆಗ ಅವರು ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ ಎಂದು ನಮಗೆ ಕೇಳಿಯಾನು 26 ಮನುಷ್ಯರಿಂದ ಬಂದಿತೆಂದು ಹೇಳಿದರೆ ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು 27 ಅನಂತರ ಅವರು ನಾವರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು ಆಗ ಆತನು ಅವರಿಗೆ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ 28 ಆದರೆ ನಿಮಗೆ ಹೇಗೆ ತೋರುತ್ತದೆ ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು ಅವನು ಮೊದಲನೆಯವನ ಬಳಿಗೆ ಬಂದು ಮಗನೇ ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು ಎಂದು ಹೇಳಲು 29 ಅವನು ಪ್ರತ್ಯುತ್ತರವಾಗಿ ನಾನು ಹೋಗುವುದಿಲ್ಲವೆಂದು ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ ತೋಟಕ್ಕೆ ಹೋದನು 30 ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು ನಾನು ಹೋಗುತ್ತೇನಪ್ಪಾ ಎಂದು ಹೇಳಿದರೂ ಅವನು ಹೋಗಲೇ ಇಲ್ಲ 31 ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು ಎಂದು ಕೇಳಿದ್ದಕ್ಕೆ ಅವರು ಮೊಲನೆಯವನೇ ಅಂದರು ಆಗ ಯೇಸು ಅವರಿಗೆ ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ 32 ಯಾಕೆಂದರೆ ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು ನೀವು ಅವನನ್ನು ನಂಬಲಿಲ್ಲ ಸುಂಕದವರು ವೇಶ್ಯೆಯರು ಅವನನ್ನು ನಂಬಿದರು ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ ಅವನನ್ನು ನಂಬಲಿಲ್ಲ 33 ಮತ್ತೊಂದು ಸಾಮ್ಯವನ್ನು ಕೇಳಿರಿ ಒಬ್ಬ ಮನೆಯ ಯಜಮಾನನಿದ್ದನು ಅವನು ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ ಕಾವಲು ಗೋಪುರವನ್ನು ಕಟ್ಟಿಸಿ ದ್ರಾಕ್ಷಿಯ ತೋಟಗಾರರಿಗೆ ಅದನ್ನು ಗುತ್ತಿಗೆಗೆ ಕೊಟ್ಟು ಅವನು ಬೇರೊಂದು ದೇಶಕ್ಕೆ ಹೋದನು 34 ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು 35 ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು ಮತ್ತೊಬ್ಬನನ್ನು ಕಡಿದು ಹಾಕಿದರು ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು 36 ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು ಅವರು ಅವರಿಗೂ ಹಾಗೆಯೇ ಮಾಡಿದರು 37 ಕಡೆಯಲ್ಲಿ ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು 38 ಆದರೆ ಆ ತೋಟಗಾರರು ಅವನ ಮಗನನ್ನು ಕಂಡು ಇವನೇ ಉತ್ತರಾಧಿಕಾರಿ ಬನ್ನಿ ಇವನನ್ನು ಕೊಂದು ಹಾಕೋಣ ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು 39 ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು 40 ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು ಅಂದನು 41 ಅವರು ಆತನಿಗೆ ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು ಎಂದು ಹೇಳಿದರು 42 ಯೇಸು ಅವರಿಗೆ ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಇದು ಕರ್ತನಿಂದಲೇ ಆಯಿತು ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ 43 ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು 44 ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು ಎಂದು ಹೇಳಿದನು 45 ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು 46 ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು

Chapter 22

ಮದುವೆ ಔತಣದ ಸಾಮ್ಯ

1 ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ 2 ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ 3 ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ 4 ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ ಔತಣ ಸಿದ್ಧವಾಗಿದೆ ನನ್ನ ಎತ್ತುಗಳನ್ನೂ ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ ಎಲ್ಲಾ ಸಿದ್ಧವಾಗಿದೆ ಮದುವೆಯ ಔತಣಕ್ಕೆ ಬನ್ನಿರಿ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು 5 ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು 6 ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು 7 ಅರಸನು ಅದನ್ನು ಕೇಳಿ ಸಿಟ್ಟುಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು 8 ಆಗ ತನ್ನ ಆಳುಗಳಿಗೆ ಮದುವೆಯ ಔತಣವು ಸಿದ್ಧವಾಗಿದೆ ಸರಿ ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ 9 ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ ಎಂದು ಹೇಳಿದನು 10 ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು ಹೀಗೆ ಮದುವೆಯ ಮಂಟಪವು ಜನರಿಂದ ತುಂಬಿಹೋಯಿತು 11 ಆ ಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು 12 ಅವನಿಗೆ ಸ್ನೇಹಿತನೇ ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ ಎಂದು ಕೇಳಲು ಅವನು ಮೌನವಾಗಿದ್ದನು 13 ಆಗ ಅರಸನು ಸೇವಕರಿಗೆ ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು 14 ಹೀಗೆ ಕರೆಯಲ್ಪಟ್ಟವರು ಬಹು ಜನ ಆರಿಸಿಕೊಳ್ಳಲ್ಪಟ್ಟವರು ಸ್ವಲ್ಪ ಜನ ಅಂದನು 15 ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು 16 ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು ಇವರು ಯೇಸುವಿಗೆ ಗುರುವೇ ನೀನು ಸತ್ಯವಂತನು ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು ಯಾರಿಗೂ ಹೆದರದವನು ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು 17 ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ ನಿನಗೆ ಹೇಗೆ ತೋರುತ್ತದೆ ನಮಗೆ ಹೇಳು ಅಂದರು 18 ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ ಕಪಟಿಗಳೇ ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ 19 ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು 20 ಆತನು ಈ ಸ್ವರೂಪವು ಈ ಮುದ್ರೆಯೂ ಯಾರದು ಎಂದು ಕೇಳಿದ್ದಕ್ಕೆ 21 ಅವರು ಕೈಸರನದು ಅಂದರು ಆಗ ಆತನು ಅವರಿಗೆ ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು 22 ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು 23 ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು 24 ಇವರು ಆತನಿಗೆ ಬೋಧಕನೇ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ 25 ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು ಮೊದಲನೆಯವನು ಮದುವೆ ಆಗಿ ತೀರಿಹೋದನು ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು 26 ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು 27 ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು 28 ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ ಎಂದು ಪ್ರಶ್ನಿಸಿದರು 29 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ 30 ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ ಮದುವೆ ಮಾಡಿಕೊಡುವುದೂ ಇಲ್ಲ ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ 31 ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ 32 ನಾನು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ ಆತನು ಸತ್ತವರಿಗೆ ದೇವರಲ್ಲ ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ ಎಂದು ಹೇಳಿದನು 33 ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು 34 ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು 35 ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು 36 ಗುರುವೇ ಧರ್ಮನಿಯಮದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು ಎಂದು ಆತನನ್ನು ಕೇಳಿದ್ದಕ್ಕೆ 37 ಯೇಸು ಅವನಿಗೆ ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು 38 ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು 39 ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬುದೇ 40 ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ ಎಂದು ಹೇಳಿದನು 41 ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ 42 ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ ಆತನು ಯಾರ ಮಗನು ಎಂದು ಕೇಳಿದ್ದಕ್ಕೆ 43 ಅವರು ಆತನಿಗೆ ದಾವೀದನ ಮಗನು ಎಂದು ಹೇಳಿದರು ಅದಕ್ಕೆ ಆತನು ಹಾಗಾದರೆ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ ಅದು ಹೇಗೆ 44 ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು 45 ಈ ಮಾತಿನಲ್ಲಿ ದಾವೀದನೇ ಆತನನ್ನು ಕರ್ತನೆಂದು ಕರೆದಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ ಅಂದನು 46 ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ

Chapter 23

ಯೇಸು ಶಾಸ್ತ್ರಿಗಳನ್ನೂ ಫರಿಸಾಯರನ್ನೂ ಗದರಿಸಿದ್ದು; ಯೆರೂಸಲೇಮಿನ ವಿಷಯದಲ್ಲಿ ದುಃಖಪಟ್ಟದ್ದು

(ಮಾರ್ಕ 12:38-40; ಲೂಕ 20:45-47)

1 ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ 2 ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ 3 ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ 4 ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು 5 ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ 6 ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು 7 ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು ಜನರಿಂದ ಗುರುಗಳೆನ್ನಿಸಿಕೊಳ್ಳುವುದು ಇವುಗಳೇ ಅವರಿಗೆ ಇಷ್ಟ 8 ಆದರೆ ನೀವು ಬೋಧಕರೆನ್ನಿಸಿಕೊಳ್ಳಬೇಡಿರಿ ಏಕೆಂದರೆ ಕ್ರಿಸ್ತ ನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು 9 ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ 10 ಮತ್ತು ಗುರುವೆಂದು ಅನ್ನಿಸಿಕೊಳ್ಳಬೇಡಿರಿ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಗುರುವು 11 ಆದರೆ ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು 12 ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು 13 ಅಯ್ಯೋ ಕಪಟಿಗಳಾದ ಶಾಸ್ತ್ರಿಗಳೇ ಫರಿಸಾಯರೇ ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ 14 ಅಯ್ಯೋ, ಕಪಟಿಗಳಾದ [1] ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.

15 ಅಯ್ಯೋ ಕಪಟಿಗಳಾದ ಶಾಸ್ತ್ರಿಗಳೇ ಫರಿಸಾಯರೇ ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ 16 ಅಯ್ಯೋ ಕುರುಡು ಮಾರ್ಗದರ್ಶಿಗಳೇ ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು ಎಂದು ಹೇಳುತ್ತೀರಿ 17 ಕುರುಡರ್ರೇ ಮೂರ್ಖರೇ ಯಾವುದು ಹೆಚ್ಚಿನದು ಚಿನ್ನವೋ ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ 18 ಮತ್ತು ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು ಎಂದು ಹೇಳುತ್ತೀರಿ 19 ಕುರುಡರೇ ಮೂರ್ಖರೇ ಯಾವುದು ಹೆಚ್ಚಿನದು ಕಾಣಿಕೆಯೋ ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ 20 ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು 21 ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು 22 ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು 23 ಅಯ್ಯೋ ಕಪಟಿಗಳಾದ ಶಾಸ್ತ್ರಿಗಳೇ ಫರಿಸಾಯರೇ ನೀವು ಪುದಿನ ಮರುಗಪತ್ರೆ ಸಬಸಿಗೆಸೊಪ್ಪು ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ ಆದರೆ ಧರ್ಮನಿಯಮದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ ಇವುಗಳನ್ನು ಮಾಡಬೇಕು ಅವುಗಳನ್ನೂ ಬಿಡಬಾರದು 24 ಕುರುಡ ಮಾರ್ಗದರ್ಶಿಗಳೇ ನೀವು ಸೊಳ್ಳೇ ಸೋಸುವವರು ಆದರೆ ಒಂಟೆ ನುಂಗುವವರು 25 ಅಯ್ಯೋ ಕಪಟಿಗಳಾದ ಶಾಸ್ತ್ರಿಗಳೇ ಫರಿಸಾಯರೇ ನೀವು ಪಾತ್ರೆ ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ 26 ಕುರುಡನಾದ ಫರಿಸಾಯನೇ ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು ಆಗ ಅವುಗಳ ಹೊರಭಾಗವೂ ಶುಚಿಯಾಗುವುದು 27 ಅಯ್ಯೋ ಕಪಟಿಗಳಾದ ಶಾಸ್ತ್ರಿಗಳೇ ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ ಇವು ಹೊರಗೆ ಸುಂದರವಾಗಿ ಕಾಣುತ್ತವೆ ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ 28 ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ 29 ಅಯ್ಯೋ ಕಪಟಿಗಳಾದ ಶಾಸ್ತ್ರಿಗಳೇ ಫರಿಸಾಯರೇ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಗೋರಿಗಳನ್ನು ಅಲಂಕರಿಸಿ 30 ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ ಅನ್ನುತ್ತೀರಿ 31 ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ 32 ಒಳ್ಳೆಯದು ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ 33 ಹಾವುಗಳೇ ಸರ್ಪಜಾತಿಯವರೇ ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ 34 ಆದುದರಿಂದ ನೋಡಿರಿ ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ ಶಿಲುಬೆಗೆ ಹಾಕುವಿರಿ ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ 35 ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು 36 ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ 37 ಯೆರೂಸಲೇಮೇ ಯೆರೂಸಲೇಮೇ ಪ್ರವಾದಿಗಳ ಪ್ರಾಣತೆಗೆಯುವವಳೇ ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು 38 ನೋಡಿರಿ ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ 39 ಈಗಿಂದ ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು


23:14 [1] 14 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಮಾರ್ಕ 12:40; ಲೂಕ 20:47

Chapter 24

ಯೆರೂಸಲೇಮಿನ ನಾಶನವನ್ನೂ, ಯುಗದ ಸಮಾಪ್ತಿಯನ್ನೂ ಕುರಿತು ಯೇಸು ಮುಂತಿಳಿಸಿದ್ದು

(ಮಾರ್ಕ 13:1-31; ಲೂಕ 21:5-33)

1 ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು 2 ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು 3 ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು ಇವೆಲ್ಲವೂ ಯಾವಾಗ ಸಂಭವಿಸುವುದು ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು ನಮಗೆ ಹೇಳು ಅನ್ನಲು 4 ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ 5 ಏಕೆಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು 6 ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು ಕಳವಳಪಡದಂತೆ ನೋಡಿಕೊಳ್ಳಿರಿ ಏಕೆಂದರೆ ಹೀಗಾಗುವುದು ಅಗತ್ಯ ಆದರೂ ಇದು ಇನ್ನೂ ಅಂತ್ಯಕಾಲವಲ್ಲ 7 ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು ಮತ್ತು ಅಲ್ಲಲ್ಲಿ ಬರಗಳು ಬರುವವು ಅಲ್ಲಲ್ಲಿ ಭೂಕಂಪಗಳು ಆಗುವವು 8 ಇವೆಲ್ಲಾ ನೂತನ ಕಾಲವು ಹುಟ್ಟುವ ಪ್ರಸವವೇದನೆಯ ಪ್ರಾರಂಭ 9 ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು 10 ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು 11 ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು 12 ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು 13 ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು 14 ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು ಆಗ ಅಂತ್ಯವು ಬರುವುದು 15 ಪ್ರವಾದಿಯಾದ ದಾನಿಯೇಲನು ಹೇಳಿದಹಾಗೆ ವಿನಾಶಕಾರಕ ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ ಇದನ್ನು ಓದುವವನು ತಿಳಿದುಕೊಳ್ಳಲಿ 16 ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ 17 ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ 18 ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ 19 ಆದರೆ ಆ ದಿನದಲ್ಲಿ ಬಸುರಿಯರಿಗೂ ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ 20 ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ 21 ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು 22 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬನಾದರೂ ಉಳಿಯನು ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು 23 ಆಗ ಯಾರಾದರು ನಿಮಗೆ ಇಗೋ ಕ್ರಿಸ್ತನು ಇಲ್ಲಿದ್ದಾನೆ ಅಗೋ ಅಲ್ಲಿದ್ದಾನೆ ಎಂದು ಹೇಳಿದರೆ ನಂಬಬೇಡಿರಿ 24 ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು 25 ನೋಡಿರಿ ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ 26 ಆದಕಾರಣ ಯಾರಾದರು ನಿಮಗೆ ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ ಇಗೋ ಒಳಕೋಣೆಗಳಲ್ಲಿದ್ದಾನೆಂದು ಹೇಳಿದರೆ ನಂಬಬೇಡಿರಿ 27 ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು 28 ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು 29 ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು ಚಂದ್ರನು ಬೆಳಕು ಕೊಡದೆ ಇರುವನು ನಕ್ಷತ್ರಗಳು ಆಕಾಶದಿಂದ ಉದುರುವವು ಆಕಾಶದ ಶಕ್ತಿಗಳು ಕದಲುವವು 30 ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು 31 ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು 32 ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ 33 ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ 34 ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ 35 ಭೂಮ್ಯಾಕಾಶಗಳು ಅಳಿದುಹೋಗುವವು ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ 36 ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು ಮಗನಿಗೂ ತಿಳಿಯದು 37 ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು 38 ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮದುವೆಮಾಡಿಕೊಡುತ್ತಾ ಇದ್ದರು 39 ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು 40 ಆಗ ಇಬ್ಬರು ಹೊಲದಲ್ಲಿರುವರು ಒಬ್ಬನು ತೆಗೆದುಕೊಳ್ಳಲ್ಪಡುವನು ಒಬ್ಬನು ಕೈ ಬಿಡಲ್ಪಡುವನು 41 ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು ಒಬ್ಬಳು ತೆಗೆದುಕೊಳ್ಳಲ್ಪಡುವಳು ಇನ್ನೊಬ್ಬಳು ಕೈ ಬಿಡಲ್ಪಡುವಳು 42 ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ 43 ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ 44 ಆದಕಾರಣ ನೀವು ಸಹ ಸಿದ್ಧವಾಗಿರಿ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ 45 ಅಂದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು 46 ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು 47 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ 48 ಆದರೆ ಆ ದುಷ್ಟ ಆಳು ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು 49 ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ ಕುಡುಕರ ಸಂಗಡ ತಿನ್ನುವುದಕ್ಕೂ ಕುಡಿಯುವುದಕ್ಕೂ ಪ್ರಾರಂಭಿಸಿದ್ದಾದರೆ 50 ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ 51 ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು

Chapter 25

ಹತ್ತುಮಂದಿ ಕನ್ಯೆಯರ ಸಾಮ್ಯ

1 ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ 2 ಅವರಲ್ಲಿ ಐದು ಮಂದಿ ಬುದ್ಧಿವಂತೆಯರು ಐದು ಮಂದಿ ಬುದ್ಧಿಹೀನರು 3 ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ 4 ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು 5 ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು 6 ಆದರೆ ಅರ್ಧರಾತ್ರಿಯಲ್ಲಿ ಇಗೋ ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ ಎಂಬ ಕೂಗು ಕೇಳಿಸಿತು 7 ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು 8 ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ 9 ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ ಎಂದು ಕೇಳಿದರು ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು ಆಗಲ್ಲಾ ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು ಅಂದರು 10 ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು ಬಾಗಿಲನ್ನು ಮುಚ್ಚಲಾಯಿತು 11 ಅನಂತರ ಉಳಿದ ಕನ್ನಿಕೆಯರು ಸಹ ಬಂದು ಕರ್ತನೇ ಕರ್ತನೇ ನಮಗೆ ಬಾಗಿಲು ತೆರೆಯಿರಿ ಅಂದರು 12 ಆದರೆ ಆತನು ಅವರಿಗೆ ಉತ್ತರವಾಗಿ ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು 13 ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು ಆದಕಾರಣ ಎಚ್ಚರವಾಗಿರಿ 14 ದೇವರ ರಾಜ್ಯವು ಹೇಗೆಂದರೆ ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು 15 ಅವನು ಒಬ್ಬನಿಗೆ ಐದು ತಲಾಂತು ಇನ್ನೊಬ್ಬನಿಗೆ ಎರಡು ಮತ್ತೊಬ್ಬನಿಗೆ ಒಂದು ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು 16 ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು 17 ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು 18 ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗಿದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು 19 ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು 20 ಐದು ತಲಾಂತು ಹೊಂದಿದವನು ಮುಂದೆಬಂದು ಇನ್ನೂ ಐದು ತಲಾಂತು ತಂದು ಯಜಮಾನನೇ ನೀನು ಐದು ತಲಾಂತನ್ನು ನನಗೆ ಕೊಟ್ಟಿದ್ದೆಯಲ್ಲಾ ಇಗೋ ಇನ್ನು ಐದು ತಲಾಂತು ಸಂಪಾದಿಸಿದ್ದೇನೆ ಅಂದನು 21 ಅವನ ಯಜಮಾನನು ಅವನಿಗೆ ಭಲಾ ನಂಬಿಗಸ್ತನಾದ ಒಳ್ಳೆಯ ಸೇವಕನೇ ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ ನಿನ್ನ ಒಡೆಯನ ಸಂತೋಷದಲ್ಲಿ ಸೇರು ಅಂದನು 22 ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು ಯಜಮಾನನೇ ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ ಇಗೋ ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ ಅಂದನು 23 ಅವನ ಯಜಮಾನನು ಅವನಿಗೆ ಭಲಾ ನಂಬಿಗಸ್ತನಾದ ಒಳ್ಳೆಯ ಸೇವಕನೇ ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ ನಿನ್ನ ಒಡೆಯನ ಸಂತೋಷದಲ್ಲಿ ಸೇರು ಎಂದು ಹೇಳಿದನು 24 ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು ಯಜಮಾನನೇ ನೀನು ಬಿತ್ತದಿರುವಲ್ಲಿ ಕೊಯ್ಯುವವನು ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು 25 ಹೆದರಿ ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು ಇಗೋ ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ ಅಂದನು 26 ಆಗ ಅವನ ಯಜಮಾನನು ಅವನಿಗೆ ಮೈಗಳ್ಳನಾದ ದುಷ್ಟ ಸೇವಕನೇ ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ 27 ಹಾಗಾದರೆ ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ 28 ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು 29 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು ಅವರಿಗೆ ಇನ್ನೂ ಹೆಚ್ಚಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು 30 ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು 31 ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು 32 ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು ಕುರುಬನು ಕುರಿಗಳನ್ನೂ ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು 33 ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು 34 ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ ಲೋಕಾಧಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳಿರಿ 35 ನಾನು ಹಸಿದಿದ್ದೆನು ನನಗೆ ಊಟ ಕೊಟ್ಟಿರಿ ನಾನು ಬಾಯಾರಿದ್ದೆನು ನನಗೆ ಕುಡಿಯುವುದಕ್ಕೆ ಕೊಟ್ಟಿರಿ ಪರದೇಶಿಯಾಗಿದ್ದೆನು ನನಗೆ ಆಶ್ರಯ ಕೊಟ್ಟಿರಿ 36 ಬಟ್ಟೆಯಿಲ್ಲದವನಾಗಿದ್ದೆನು ನನಗೆ ಉಡುವುದಕ್ಕೆ ಕೊಟ್ಟಿರಿ ಅಸ್ವಸ್ಥನಾಗಿದ್ದಾಗ ನನ್ನನ್ನು ಆರೈಕೆ ಮಾಡಿದಿರಿ ಸೆರೆಮನೆಯಲ್ಲಿದ್ದೆನು ನನ್ನನ್ನು ನೋಡುವುದಕ್ಕೆ ಬಂದಿರಿ ಎಂದು ಹೇಳುವನು 37 ಅದಕ್ಕೆ ಉತ್ತರವಾಗಿ ನೀತಿವಂತರು ಕರ್ತನೇ ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು 38 ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು 39 ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು ಎಂದು ಕೇಳುವರು 40 ಅದಕ್ಕೆ ಉತ್ತರವಾಗಿ ಅರಸನು ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು 41 ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ ಶಾಪಗ್ರಸ್ತರೇ ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ 42 ನಾನು ಹಸಿದಿದ್ದೆನು ನೀವು ನನಗೆ ಊಟ ಕೊಡಲಿಲ್ಲ ನಾನು ಬಾಯಾರಿದ್ದೆನು ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ 43 ಪರದೇಶಿಯಾಗಿದ್ದೆನು ನೀವು ನನಗೆ ಆಶ್ರಯ ಕೊಡಲಿಲ್ಲ ಬಟ್ಟೆಯಿಲ್ಲದವನಾಗಿದ್ದೆನು ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ ಅಸ್ವಸ್ಥನಾಗಿದ್ದೆನು ಸೆರೆಮನೆಯಲ್ಲಿದ್ದೆನು ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು ಹೇಳುವನು 44 ಅದಕ್ಕೆ ಉತ್ತರವಾಗಿ ಅವರೂ ಸಹ ಕರ್ತನೇ ಯಾವಾಗ ನೀನು ಹಸಿದಿದ್ದನ್ನೂ ನೀನು ಬಾಯಾರಿದ್ದನ್ನೂ ನೀನು ಪರದೇಶಿಯಾಗಿದ್ದನ್ನೂ ಬಟ್ಟೆಯಿಲ್ಲದವನಾಗಿದ್ದನ್ನೂ ಅಸ್ವಸ್ಥನಾಗಿದ್ದುದನ್ನೂ ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು ಅನ್ನುವರು 45 ಆಗ ಆತನು ಉತ್ತರವಾಗಿ ಅವರಿಗೆ ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು 46 ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು ಎಂದು ಹೇಳಿದನು

Chapter 26

ಅಧಿಕಾರಸ್ಥರು ಯೇಸುವನ್ನು ಕೊಲ್ಲಬೇಕೆಂದು ಆಲೋಚಿಸಿದ್ದು

(ಮಾರ್ಕ 14:1-11; ಲೂಕ 22:1-6; ಯೋಹಾ. 12:1-8)

1 ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ 2 ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು ಎಂದು ಹೇಳಿದನು 3 ಆ ಕಾಲದಲ್ಲಿ ಮುಖ್ಯಯಾಜಕರೂ ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು 4 ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು 5 ಆದರೂ ಹಬ್ಬದಲ್ಲಿ ಹಿಡಿಯಬಾರದು ನಮ್ಮ ಜನರಲ್ಲಿ ಗದ್ದಲವಾದೀತು ಎಂದು ಮಾತನಾಡಿಕೊಂಡರು 6 ಯೇಸು ಬೆಥಾನ್ಯದಲ್ಲಿ ಸೀಮೋನನೆಂಬ ಕುಷ್ಠರೋಗಿಯ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಒಬ್ಬ ಸ್ತ್ರೀಯು 7 ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು 8 ಶಿಷ್ಯರು ಇದನ್ನು ಕಂಡು ಕೋಪಗೊಂಡು ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ 9 ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು 10 ಯೇಸು ಅದನ್ನು ತಿಳಿದು ಅವರಿಗೆ ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ 11 ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ 12 ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ 13 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ ಹೇಳುವರು 14 ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರು ಬಳಿಗೆ ಹೋಗಿ 15 ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ ಅಂದನು ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು 16 ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು 17 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಲಿದರು 18 ಆತನು ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ ನನ್ನ ಕಾಲ ಸಮೀಪವಾಯಿತು ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ ಅಂದನು 19 ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು 20 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು 21 ಅವರು ಊಟಮಾಡುತ್ತಿರುವಾಗ ಆತನು ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಅಂದನು 22 ಆಗ ಅವರು ಬಹಳ ದುಃಖಪಟ್ಟು ಕರ್ತನೇ ನಾನಲ್ಲವಲ್ಲಾ ಎಂದು ಪ್ರತಿಯೊಬ್ಬರು ಕೇಳತೊಡಗಿದರು 23 ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು 24 ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನಿಗೆ ಆಯ್ಯೋ ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು ಅಂದನು 25 ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು ಗುರುವೇ ನಾನೋ ಎಂದು ಕೇಳಲು ಯೇಸು ಅವನಿಗೆ ನೀನೇ ಹಾಗೆ ಹೇಳಿದ್ದೀ ಎಂದು ಹೇಳಿದನು 26 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು ತೆಗೆದುಕೊಳ್ಳಿರಿ ತಿನ್ನಿರಿ ಇದು ನನ್ನ ದೇಹ ಅಂದನು 27 ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ ಇದು ನನ್ನ ರಕ್ತ 28 ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸಒಡಂಬಡಿಕೆಯ ರಕ್ತ 29 ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು 30 ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು 31 ಆಗ ಯೇಸು ಅವರಿಗೆ ಕುರುಬನನ್ನು ಹೊಡೆಯುವೆನು ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ 32 ಆದರೆ ನಾನು ಜೀವಿತನಾಗಿ ಎದ್ದ ಮೇಲೆ ನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು ಎಂದು ಹೇಳಿದನು 33 ಆದರೆ ಪೇತ್ರನು ಆತನಿಗೆ ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ ಎಂದು ಉತ್ತರ ಕೊಟ್ಟನು 34 ಯೇಸು ಪೇತ್ರನಿಗೆ ನಿನಗೆ ಸತ್ಯವಾಗಿ ಹೇಳುತ್ತೇನೆ ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ ಅಂದನು 35 ಪೇತ್ರನು ಆತನಿಗೆ ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ ಎಂದು ಹೇಳಿದನು ಅದರಂತೆ ಶಿಷ್ಯರೆಲ್ಲರೂ ಹೇಳಿದರು 36 ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ ಇಲ್ಲೇ ಕುಳಿತುಕೊಳ್ಳಿರಿ ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿ 37 ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು 38 ಮತ್ತು ಅವರಿಗೆ ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ ಎಂದು ಹೇಳಿದನು 39 ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು ನನ್ನ ತಂದೆಯೇ ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು 40 ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ 41 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ ಎಂದು ಹೇಳಿದನು 42 ತಿರುಗಿ ಎರಡನೇ ಸಾರಿ ಹೋಗಿ ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು 43 ಆತನು ತಿರುಗಿ ಬಂದಾಗಲೂ ಅವರು ನಿದ್ದೆಮಾಡುವುದನ್ನು ಕಂಡನು ಅವರ ಕಣ್ಣುಗಳು ಭಾರವಾಗಿದ್ದವು 44 ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು 45 ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ ಇಗೋ ಅ ಗಳಿಗೆ ಸಮೀಪಿಸಿತು ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ 46 ಏಳಿರಿ ಹೋಗೋಣ ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ ಎಂದು ಹೇಳಿದನು 47 ಯೇಸು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು 48 ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು ಅವನನ್ನು ಹಿಡಿಯಿರಿ ಎಂದು ಮುನ್ಸೂಚನೆ ನೀಡಿದ್ದನು 49 ಕೂಡಲೇ ಅವನು ಯೇಸುವಿನ ಬಳಿಗೆ ಬಂದು ಗುರುವೇ ನಮಸ್ಕಾರ ಎಂದು ಹೇಳಿ ಆತನಿಗೆ ಮುದ್ದಿಟ್ಟನು 50 ಯೇಸು ಅವನಿಗೆ ಗೆಳೆಯನೇ ನೀನು ಯಾಕೆ ಬಂದಿರುವೇ ಎಂದು ಹೇಳಿದನು ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು 51 ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು 52 ಆಗ ಯೇಸು ಅವನಿಗೆ ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು 53 ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ 54 ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ ಎಂದು ಹೇಳಿದನು 55 ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ 56 ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು 57 ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು 58 ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು 59 ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ 60 ಅನಂತರ ಇಬ್ಬರು ಮುಂದೆ ಬಂದು 61 ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ಈ ಮನುಷ್ಯನು ಹೇಳಿದನು ಅಂದರು 62 ಆಗ ಮಹಾಯಾಜಕನು ಎದ್ದು ನಿಂತು ನೀನೇನೂ ಉತ್ತರಹೇಳುವುದಿಲ್ಲವೋ ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು ಎಂದು ಆತನನ್ನು ಕೇಳಿದನು ಆದರೆ ಯೇಸು ಸುಮ್ಮನಿದ್ದನು 63 ಮಹಾಯಾಜಕನು ಯೇಸುವಿಗೆ ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು ಅಂದನು 64 ಯೇಸು ಪ್ರತ್ಯುತ್ತರವಾಗಿ ನೀನೇ ಹೇಳಿದ್ದೀ ಆದರೆ ನಾನು ನಿಮಗೆ ಹೇಳುವುದೇನೆಂದರೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ ಅಂದನು 65 ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು ಇವನು ದೇವದೂಷಣೆಯ ಮಾತನಾಡಿದ್ದಾನೆ ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ 66 ನಿಮಗೆ ಹೇಗೆ ತೋರುತ್ತದೆ ಅನ್ನಲು ಇವನು ಮರಣದಂಡನೆಗೆ ಯೋಗ್ಯನು ಎಂದು ಅವರು ಉತ್ತರಕೊಟ್ಟರು 67 ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು ಕೆಲವರು ಆತನ ಕೆನ್ನೆಗೆ ಹೊಡೆದು 68 ಕ್ರಿಸ್ತನೇ ನಿನ್ನನ್ನು ಹೊಡೆದವರಾರು ನಮಗೆ ಪ್ರವಾದನೆ ಹೇಳು ಅಂದರು 69 ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು ಅಲ್ಲವೇ ಎನ್ನಲು 70 ಅವನು ನಿರಾಕರಿಸಿ ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ ಎಂದು ಎಲ್ಲರ ಮುಂದೆ ಹೇಳಿದನು 71 ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು ಎಂದು ಹೇಳಿದಳು 72 ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು ಆ ಮನುಷ್ಯನನ್ನು ನಾನರಿಯೆನು ಎಂದು ಹೇಳಿದನು 73 ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು ನಿನ್ನ ಭಾಷೆಯೇ ನಿನ್ನನ್ನು ಗಲಿಲಾಯದವನೆಂದು ತೋರಿಸಿಕೊಡುತ್ತದೆ ಎಂದು ಹೇಳಲು 74 ಅವನು ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು ಆ ಮನುಷ್ಯನನ್ನು ನಾನರಿಯೆನು ಎಂದು ಹೇಳಿದನು ಕೂಡಲೇ ಹುಂಜವೂ ಕೂಗಿತು 75 ಪೇತ್ರನಿಗೆ ಯೇಸು ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸಿ ಹೇಳುವಿ ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು

Chapter 27

1 ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು 2 ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪೋನಥ್ಯ ಪಿಲಾತನಿಗೆ ಒಪ್ಪಿಸಿದರು 3 ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ ಪಶ್ಚಾತ್ತಾಪಪಟ್ಟು ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು 4 ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ ಅಂದನು ಅದಕ್ಕವರು ಅದು ನಮಗೇನು ನೀನೇ ನೋಡಿಕೋ ಅಂದರು 5 ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು 6 ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು ಎಂದರು 7 ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು 8 ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ ಜೀವಹತ್ಯದ ಹೊಲವೆಂಬ ಹೆಸರು ಇದೆ 9 ಅದೇನಂದರೆ ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು ಕರ್ತನು ನನಗೆ ಅಪ್ಪಣೆಮಾಡಿದಂತೆ 10 ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು 11 ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು ಯೇಸು ನೀನೇ ಹೇಳಿದ್ದೀ ಅಂದನು 12 ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ 13 ನಂತರ ಪಿಲಾತನು ಆತನನ್ನು ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ ನಿನಗೆ ಕೇಳಿಸುತ್ತಿಲ್ಲವೋ ಎಂದು ಕೇಳಿದನು 14 ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು 15 ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು 16 ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು. 17 ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, <<ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?>> ಎಂದು ಅವರನ್ನು ಕೇಳಿದನು. 18 ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು. 19 ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, <<ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು>> ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು. 20 ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು. 21 ಅದಕ್ಕೆ ದೇಶಾಧಿಪತಿಯು ಅವರನ್ನು, <<ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?>> ಎಂದು ಕೇಳಲು ಅವರು <<ಬರಬ್ಬನನ್ನು>> ಅಂದರು. 22 ಪಿಲಾತನು ಅವರನ್ನು, <<ಹಾಗಾದರೆ ಕ್ರಿಸ್ತನೆನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?>> ಎಂದು ಕೇಳಲು ಎಲ್ಲರೂ, <<ಅವನನ್ನು ಶಿಲುಬೆಗೆ ಹಾಕಿಸು>> ಅಂದರು. 23 ಅದಕ್ಕವನು <<ಏಕೆ? ಈತನು ಮಾಡಿದ ಅಪರಾಧವೇನು?>> ಅಂದನು. ಆದರೆ ಅವರು, <<ಅವನನ್ನು ಶಿಲುಬೆಗೆ ಹಾಕಿಸು>> ಎಂದು ಬಹಳವಾಗಿ ಆರ್ಭಟಿಸಿದರು. 24 ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ [1] ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು [2] ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, <<ಈ ನೀತಿವಂತನನ್ನು [3] ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ>> ಎನ್ನಲು 25 ಜನರೆಲ್ಲಾ, << [4] ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ>> ಅಂದರು. 26 ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.

ಯೇಸುವನ್ನು ಅಪಹಾಸ್ಯ ಮಾಡಿ ಶಿಲುಬೆಗೆ ಹಾಕಿದ್ದು

(ಮಾರ್ಕ 15:16-41; ಲೂಕ 23:26,33-49; ಯೋಹಾ. 19:2-3,16-30)

27 ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು, 28 ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ, 29 ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, <<ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ>> ಎಂದು ಆತನನ್ನು ಪರಿಹಾಸ್ಯಮಾಡಿ 30 ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು. 31 ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.

ಗೊಲ್ಗೊಥಾಕ್ಕೆ ಪ್ರಯಾಣ

32 ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು. 33 ಅವರೆಲ್ಲರೂ ಗೊಲ್ಗೊಥಾ ಅಂದರೆ <<ಕಪಾಲಸ್ಥಳ>> ಎಂಬ ಸ್ಥಾನಕ್ಕೆ ಬಂದಾಗ 34[5] ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು. 35 ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು; 36 ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು. 37 ಇದಲ್ಲದೆ ಆತನ ಮೇಲೆ ಹೊರಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನಂದರೆ, <<ಈತನು ಯೇಸು, ಯೆಹೂದ್ಯರ ಅರಸನು>> ಎಂಬುದೇ. 38 ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. 39 ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ, 40 <<ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ>> ಎಂದು ಆತನನ್ನು ಹಂಗಿಸುತ್ತಿದ್ದರು. 41 ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, <<ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 42 ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು. 43 ಅವನು [6] ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; <ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ> >> ಎಂದು ಅಣಕಿಸಿ ಮಾತನಾಡುತ್ತಿದ್ದರು. 44 ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.

ಯೇಸುವಿನ ಮರಣ

45[7] ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. 46 ಸುಮಾರು ಮೂರು ಘಂಟೆಗೆ ಯೇಸು, [8] <<ಏಲೀ, ಏಲೀ, ಲಮಾ ಸಬಕ್ತಾನೀ>> ಎಂದು ಮಹಾ ಧ್ವನಿಯಿಂದ ಕೂಗಿದನು. ಅಂದರೆ, <<ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ.>> 47 ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, <<ಇವನು ಎಲೀಯನನ್ನು ಕರೆಯುತ್ತಿದ್ದಾನೆ>> ಅಂದನು. 48 ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು. 49 ಮಿಕ್ಕಾದವರು, <<ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ>> ಅಂದರು [9] . 50 ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು. 51 ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು; 52 ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ [10] ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು; 53 ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. 54 ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, <<ನಿಜವಾಗಿ ಈತನು [11] ದೇವಕುಮಾರನಾಗಿದ್ದನು>> ಅಂದರು. 55 ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು. 56 ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.

ಶಿಷ್ಯರು ಯೇಸುವಿನ ದೇಹವನ್ನು ಸಮಾಧಿಯಲ್ಲಿ ಇರಿಸಿದ್ದು

(ಮಾರ್ಕ 15:42-47; ಲೂಕ 23:50-56; ಯೋಹಾ. 19:38-42)

57 ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು. 58 ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು. 59 ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ 60 ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು. 61 ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.

62 ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು, 63 <<ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ <ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ> ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು; 64 ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ>> ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು. 65 ಪಿಲಾತನು ಅವರಿಗೆ, <<ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ>> ಎಂದು ಹೇಳಲು 66 ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.


27:24 [1] ಮತ್ತಾ. 26:5
27:24 [2] ಧರ್ಮೋ. 21:6-8
27:24 [3] ರಕ್ತದಲ್ಲಿ
27:25 [4] ಆತನನ್ನು ಕೊಲ್ಲಿಸಿದ್ದ ಅಪರಾಧವು
27:34 [5] ಕೀರ್ತ 69:21
27:43 [6] ಕೀರ್ತ 22:8
27:45 [7] 6 ತಾಸಿನಿಂದ 9 ತಾಸಿನ ತನಕ
27:46 [8] ಕೀರ್ತ 22:1
27:49 [9] ಕೆಲವು ಪತ್ರಿಕೆಯಲ್ಲಿ, ಮತ್ತೊಬ್ಬನು ಈಟಿಯನ್ನು ತೆಗೆದುಕೊಂಡು ಆತನ ಪಕ್ಕೆಯನ್ನು ತಿವಿದನು; ತಿವಿಯಲೂ ನೀರು ರಕ್ತವು ಹರಿಯಿತು ಎಂದು ಬರೆದಿದೆ; ಯೋಹಾ. 19:34
27:52 [10] ಸತ್ತುಹೋಗಿದ್ದ
27:54 [11] ದಾನಿ. 3:25

Chapter 28

ಯೇಸುವಿನ ಪುನರುತ್ಥಾನ

(ಮಾರ್ಕ 16:1-10; ಲೂಕ 24:1-10; ಯೋಹಾ. 20:1-18)

1 ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ [1] ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು. 2 ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು. 3 ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು; 4 ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು. 5 ಆಗ ದೂತನು ಆ ಹೆಂಗಸರಿಗೆ, <<ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು; 6 ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ; 7 ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, <ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, [2] ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ> ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,>> ಎಂದು ಹೇಳಿದನು. 8 ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು. 9 ಆಗ ಯೇಸು ಅವರನ್ನು ಭೇಟಿಯಾಗಿ, <<ನಿಮಗೆ ಶುಭವಾಗಲಿ>> ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು. 10 ಆಗ ಯೇಸು ಅವರಿಗೆ, <<ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು>> ಎಂದು ಹೇಳಿದನು.

ಕಾವಲು ಗಾರನ ಸುದ್ಧಿ

11 ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು. 12 ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು, 13 << <ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು> ಎಂದು ಹೇಳಿರಿ; 14 ಈ ಸುದ್ದಿಯು ಶತಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ>> ಎಂದರು. 15 ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.

ಯೇಸುವಿನ ಕಡೆಯ ಅಪ್ಪಣೆ

16 ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು. 17 ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು. 18 ಯೇಸು ಅವರ ಹತ್ತಿರಕ್ಕೆ ಬಂದು, <<ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. 19[3] ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. 20 ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು [4] ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ>> ಎಂದು ಹೇಳಿದನು.


28:1 [1] ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇದ್ದಾಗ
28:7 [2] ಮತ್ತಾ. 28:10,16; 26:32
28:19 [3] ಮಾರ್ಕ 16:15,16; ಲೂಕ 24:47
28:20 [4] ಮತ್ತಾ. 18:20; ಯೋಹಾ. 14:18,19